THIRTHAHALLI ; ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಸರ್ಕಲ್ ಬಳಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಬೆಜ್ಜವಳ್ಳಿ ಸಮೀಪದ ತನಿಕಲ್ ಗ್ರಾಮದ ಕೌಟುಮನೆ ನಿವಾಸಿ ಪ್ರಥಮ್ (16) ಮೃತ ದುರ್ಧೈವಿ. ಈತ ಡಿಪ್ಲೊಮೊ ಸ್ಟೂಡೆಂಟ್ ಆಗಿದ್ದು ಕಾಲೇಜಿಗೆ ತೆರಳುವ ವೇಳೆ ಏಕಾಏಕಿ ತೀರ್ಥಹಳ್ಳಿ – ಶಿವಮೊಗ್ಗ ಮುಖ್ಯ ರಸ್ತೆಗೆ ಬಂದಿದ್ದಾನೆ. ಈ ವೇಳೆ ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಪ್ರಥಮ್ ಗೆ ಗಂಭೀರ ಗಾಯವಾಗಿದ್ದು ಮಣಿಪಾಲ ಆಸ್ಪತ್ರೆಗೆ ರವಾನಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.
ಈ ಘಟನೆಯಲ್ಲಿ ಬಸ್ ಮುಂಭಾಗ ಹಾಗೂ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.