Ripponpete

ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ; ಬೆಳ್ಳೂರು ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾದರಿಯಾದ ವ್ಯವಸ್ಥೆ

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಪ್ರೌಢಶಾಲೆ ಬೆಳ್ಳೂರಿನಲ್ಲಿ ಈ ಬಾರಿಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ಕೈಗೊಂಡ ವ್ಯವಸ್ಥೆ ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರವಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಪರೀಕ್ಷೆಯ ದಿನಗಳಲ್ಲಿ ವಿದ್ಯಾರ್ಥಿಗಳನ್ನು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಹೋಗುವುದು ಹಾಗೂ ಪರೀಕ್ಷೆ ಮುಗಿದ ನಂತರ ಸುರಕ್ಷಿತವಾಗಿ ಮರಳಿ ಶಾಲೆಗೆ ತಲುಪಿಸುವ ಮಹತ್ವದ ಜವಾಬ್ದಾರಿಯನ್ನು ಶಾಲೆಯ ಮುಖ್ಯ ಶಿಕ್ಷಕ ಬಿ.ಪಿ. ಸೋಮಶೇಖರ್ ಅವರ ನೇತೃತ್ವದಲ್ಲಿ ಅತ್ಯಂತ ವ್ಯವಸ್ಥಿತವಾಗಿ ನಿರ್ವಹಿಸಲಾಯಿತು.

ವಿದ್ಯಾರ್ಥಿಗಳ ಭದ್ರತೆ ಮತ್ತು ಸಮಯಪಾಲನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ ಈ ಕಾರ್ಯದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಸಹಕರಿಸಿ, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಮೊದಲಿಗಾಗಿಟ್ಟಿದ್ದರು. ಪ್ರತಿದಿನವೂ ವಿದ್ಯಾರ್ಥಿಗಳು ಯಾವುದೇ ತೊಂದರೆಯಿಲ್ಲದೆ ಪರೀಕ್ಷೆ ಬರೆಯಲು ಅನುಕೂಲ ಕಲ್ಪಿಸುವಲ್ಲಿ ಶಾಲೆಯ ಪ್ರಯತ್ನ ಶ್ಲಾಘನೀಯವಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪೋಷಕರು ಹಾಗೂ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿ, ಈ ಸೇವೆಯನ್ನು ಗುರುತಿಸಿ ವಿದ್ಯಾರ್ಥಿಗಳನ್ನು ರಿಪ್ಪನ್‌ಪೇಟೆ ಪರೀಕ್ಷೆ ಕೇಂದ್ರಕ್ಕೆ ಕರೆದುಕೊಂಡು ಹೋಗಲು ಸಹಕರಿಸಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಚಾಲಕ ಹಾಗೂ ನಿರ್ವಾಹಕರಿಗೆ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಾಲಾ ಅಭಿವೃದ್ಧಿ ಸಮಿತಿಯವರು ಗ್ರಾಮಸ್ಥರು ಗೌರವ ಸಮರ್ಪಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಹಾಗೂ ಅವರ ಸುರಕ್ಷತೆಗೆ ಇಂತಹ ಕ್ರಮಗಳು ಮಾದರಿಯಾಗಿದ್ದು, ಇತರ ಶಾಲೆಗಳಿಗೂ ಪ್ರೇರಣೆಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>