ಹೊಸನಗರ

ಹೊಸನಗರ ; ವಿದ್ಯಾರ್ಥಿಗಳಿಗೆ ಹೂಗುಚ್ಚ ನೀಡಿ ಕಾಲೇಜಿಗೆ ಸ್ವಾಗತ

ಹೊಸನಗರ ; ಸರ್ಕಾರದ ಅಧಿ ಸೂಚನೆಯಂತೆ ಸೋಮವಾರದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಹಾಗೂ ದ್ವಿತೀಯ ಪಿಯುಸಿ ತರಗತಿಯನ್ನು ಪ್ರಾರಂಭಿಸಲಾಗಿದೆ ಎಂದು ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸ್ವಾಮಿರಾವ್‌ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now

ಸೋಮವಾರ ಬೆಳಿಗ್ಗೆ ಶಾಲೆಯ ಆವರಣದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹೂಗುಚ್ಚ ನೀಡಿ ಅದ್ದೂರಿಯಾಗಿ ಸ್ವಾಗತಿಸುವ ಸಂದರ್ಭದಲ್ಲಿ ಮಾತನಾಡಿದರು.

ಹೊಸನಗರದ ಪದವಿ ಪೂರ್ವ ಕಾಲೇಜಿನಲ್ಲಿ ಹಿಂದಿನ ಸಾಲಿನಲ್ಲಿ ಅತ್ಯುತ್ತಮ ಫಲಿತಾಂಶ ಬಂದಿದೆ. ನಮ್ಮಲ್ಲಿ ನುರಿತ ಉಪನ್ಯಾಸಕರ ವರ್ಗವಿದೆ. ಪ್ರತಿ ವರ್ಷ ಉತ್ತಮ ಫಲಿತಾಂಶ ಬರುತ್ತಿದೆ ಜೊತೆಗೆ ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಸರ್ಕಾರಿ ಹಾಸ್ಟೆಲ್ ಸೌಲಭ್ಯಗಳು ಸಿಗುತ್ತಿದೆ. ನುರಿತ ಉಪನ್ಯಾಸಕರ ಜೊತೆ ಉತ್ತಮ ಫಲಿತಾಂಶಕ್ಕಾಗಿ ಪ್ರತಿಯೊಬ್ಬ ಉಪನ್ಯಾಸಕರು ಹಾಗೂ ಗೌರವ ಉಪನ್ಯಾಸಕರು ಶ್ರಮ ವಹಿಸುತ್ತಿದ್ದಾರೆ. ನಮ್ಮ ಕಾಲೇಜಿನ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಶಾಸಕರಾದ ಬೇಳೂರು ಗೋಪಾಲಕೃಷ್ಣರವರು ಹಾಗೂ ಉಪಾಧ್ಯಕ್ಷ ಎಂ.ಪಿ ಸುರೇಶ್‌ ಶಾಲೆಯ ಉತ್ತಮ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಕಾಲೇಜಿನ ಬೇಕಾಗುವಂಥಹ ಎಲ್ಲ ಸೌಲಭ್ಯಗಳನ್ನು ನೀಡುತ್ತಿದ್ದಾರೆ. ನಮ್ಮಲ್ಲಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಿದ್ದು ಮೂರು ವಿಭಾಗದಲ್ಲಿಯೂ ಉತ್ತಮ ಫಲಿತಾಂಶ ಹಿಂದಿನ ವರ್ಷದಲ್ಲಿ ಬಂದಿದೆ. ಮುಂದಿನ ದಿನದಲ್ಲಿ ಇನ್ನೂ ಉತ್ತಮ ಫಲಿತಾಂಶ ತರಲು ಪ್ರಯತ್ನಿಸುತೇವೆಂದು ರಾಜ್ಯಕ್ಕೆ, ಹೊಸನಗರಕ್ಕೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ತರಲು ಶ್ರಮಿಸುವುದಾಗಿ ತಿಳಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಸಂದರ್ಭದಲ್ಲಿ ಹಿರಿಯ ಉಪನ್ಯಾಸಕ ದಾಮೋದರ ಶೆಣೈ ಹಾಗೂ ಕಾಲೇಜಿನ ಎಲ್ಲ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದು ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]