RIPPONPETE ; ಹೊಸನಗರದ ನೆಹರೂ ಮೈದಾನದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ 14 ವರ್ಷದ ವಯೋಮಿತಿಯ ಬಾಲಕರ ವಿಭಾಗದ ಕ್ರೀಡಾಕೂಟದಲ್ಲಿ ಹೆದ್ದಾರಿಪುರ ಶ್ರೀ ಶಿವ ರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ರಿಪ್ಪನ್‌ಪೇಟೆ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳ ಮೇಲೆ ನಡೆದೆ ರೋಚಕ ಹಣಾಹಣಿಯಲ್ಲಿ ಹೆದ್ದಾರಿಪುರ ಶ್ರೀ ಶಿವ ರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ಮಕ್ಕಳ ತಂಡ ಗೆಲವು ಪಡೆಯಿತು.

ಶಾಲಾ ಮಕ್ಕಳ ಕ್ರೀಡಾ ಸಾಧನೆಗೆ ಶಾಲಾ ಆಡಳಿತ ಮಂಡಳಿ ಮತ್ತು ಪೋಷಕ ವರ್ಗ ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಮಕ್ಕಳನ್ನು ಗೌರವಿಸಿದರು.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

