Hosanagara

ಕ್ರೀಡಾಕೂಟ ; ಹೊಸನಗರ ಮಲೆನಾಡು ಪ್ರೌಢಶಾಲೆ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

HOSANAGARA ; ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಸೇಂಟ್ ಚಾರ್ಲ್ಸ್ ನ್ಯೂ ಟೌನ್ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ 17 ವರ್ಷದೊಳಗಿನ ಕ್ರೀಡಾಕೂಟದಲ್ಲಿ ಹೊಸನಗರದ ಮಲೆನಾಡು ಪ್ರೌಢಶಾಲೆ ಬಾಲಕಿಯರು ಥ್ರೋಬಾಲ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟದ ಪ್ರಶಸ್ತಿಯ ಗರಿಯನ್ನು ತಮ್ಮದಾಗಿಸಿಕೊಂಡರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ತಂಡದಲ್ಲಿ ನಾಯಕಿ ಶರಣ್ಯ, ಭೂವಿತಾ, ಸಿಮ್ರಾನ್, ಮೇಘನಾ, ಸಿಂಚನಾ, ಚಿತ್ರ, ಅಮೂಲ್ಯ, ಭವ್ಯ, ಅನುಷಾ ಹಾಗೂ ಇಂಚರ ಭಾಗವಹಿಸಲಿದ್ದಾರೆ.

ಶಾಲೆಯ ದೈಹಿಕ ಶಿಕ್ಷಕ ಎಸ್ ಎಲ್ ಸುರೇಶ್, ತಂಡದ ಮ್ಯಾನೇಜರ್ ಹಾಲಮ್ಮ ಹಾಗೂ ಶಿವರಾಜ್ ಕುಮಾರ್, ಜ್ಯೋತಿ ಮತ್ತು ತರಬೇತುದಾರರಾದ ಮಹೇಶ, ಶರತ್, ಭರತ್ ಇಂದು ಮಲೆನಾಡು ಪ್ರೌಢಶಾಲೆಯಲ್ಲಿ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಪಾಲ್ಗೊಂಡು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

ಈ ತಂಡ ಅ‌. 24ರಂದು ಬೆಂಗಳೂರು ಜಿಲ್ಲೆ ಕನಕಪುರದಲ್ಲಿ ನಡೆಯಲಿರುವ ವಿಭಾಗ ಮಟ್ಟದ ಪಂದ್ಯಾವಳಿಯಲ್ಲಿ ತಮ್ಮ ಕ್ರೀಡಾಕೌಶಲ್ಯವನ್ನು ಪ್ರದರ್ಶಿಸಲಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರು, ಶಾಲಾ ಆಡಳಿತ ಮಂಡಳಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>