ರೇಷ್ಮೆ ಇಲಾಖೆಯ ವತಿಯಿಂದ 2026–27ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಗಳಡಿ ರೇಷ್ಮೆ ಬೆಳೆಗಾರರು ಹಾಗೂ ರೇಷ್ಮೆ ಕೃಷಿಯಲ್ಲಿ ಆಸಕ್ತಿ ಹೊಂದಿರುವ ರೈತರಿಂದ ವಿವಿಧ ಯೋಜನೆಗಳ ಸಹಾಯಧನ ಪಡೆಯಲು ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಹೊಸದಾಗಿ ಹಿಪ್ಪುನೇರಳೆ (ಮಲ್ಬೆರಿ) ತೋಟ ಸ್ಥಾಪಿಸಲು ಬಯಸುವ ರೈತರಿಗೆ ಆರ್ಥಿಕ ನೆರವು ನೀಡಲಾಗುವುದು. ಅಲ್ಲದೆ, ಸ್ವಂತ ನರ್ಸರಿ ಸ್ಥಾಪಿಸಲು ಆಸಕ್ತಿ ಹೊಂದಿರುವ ರೈತರಿಗೆ ಸಹ ಸಹಾಯಧನದ ಸೌಲಭ್ಯ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ರೈತರು ಆಗಸ್ಟ್ 14ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಮಾತ್ರ ಸ್ವೀಕರಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗೆ
ಯೋಜನೆಯ ಅರ್ಹತೆ, ನಿಯಮಗಳು ಹಾಗೂ ಅಗತ್ಯ ದಾಖಲೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ರೇಷ್ಮೆ ಉಪನಿರ್ದೇಶಕರ ಕಚೇರಿ, 100 ಅಡಿ ರಸ್ತೆ, ರಾಜೇಂದ್ರನಗರ, ಶಿವಮೊಗ್ಗವನ್ನು ಸಂಪರ್ಕಿಸಬಹುದು.
ಹೆಚ್ಚಿನ ವಿವರಗಳು ಹಾಗೂ ಆನ್‌ಲೈನ್ ಅರ್ಜಿ ಸಲ್ಲಿಸಲು:
ಶಿವಮೊಗ್ಗ ಜಿಲ್ಲಾಡಳಿತದ ಅಧಿಕೃತ ವೆಬ್‌ಸೈಟ್
ದೂರವಾಣಿ: 08182-184637
ರೇಷ್ಮೆ ಕೃಷಿ ವಿಸ್ತರಣೆ ಮತ್ತು ರೈತರ ಆದಾಯ ಹೆಚ್ಚಿಸುವ ಉದ್ದೇಶದಿಂದ ಈ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಅರ್ಹ ರೈತರು ಇದರ ಪ್ರಯೋಜನ ಪಡೆಯುವಂತೆ ರೇಷ್ಮೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

