ಹೊಸನಗರ

ಹೊಸನಗರ ರೈತರಿಗೆ ಸಿಹಿಸುದ್ದಿ: ಮೈಲುತುತ್ತ ಖರೀದಿಗೆ ತೋಟಗಾರಿಕೆ ಇಲಾಖೆಯಿಂದ ಭರ್ಜರಿ ಸಹಾಯಧನ!

2026-27ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ (N.H.M.) ಯೋಜನೆಯ ಅಡಿಯಲ್ಲಿ ಸಮಗ್ರ ಪೋಷಕಾಂಶ ನಿರ್ವಹಣೆ (INM) ಮತ್ತು ಸಮಗ್ರ ಕೀಟ ನಿರ್ವಹಣೆ (IPM) ಕಾರ್ಯಕ್ರಮದಡಿ, ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ರೈತರು ಮೈಲುತುತ್ತ ಖರೀದಿಸಿದ್ದಲ್ಲಿ ಸಹಾಯಧನ ನೀಡಲು ತೋಟಗಾರಿಕೆ ಇಲಾಖೆಯು ಅರ್ಜಿ ಆಹ್ವಾನಿಸಿದೆ.

Horticulture Office Hosanagara

ಹೊಸನಗರ: 2026-27ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ (N.H.M.) ಯೋಜನೆಯ ಅಡಿಯಲ್ಲಿ ಸಮಗ್ರ ಪೋಷಕಾಂಶ ನಿರ್ವಹಣೆ (INM) ಮತ್ತು ಸಮಗ್ರ ಕೀಟ ನಿರ್ವಹಣೆ (IPM) ಕಾರ್ಯಕ್ರಮದಡಿ, ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ರೈತರು ಮೈಲುತುತ್ತ ಖರೀದಿಸಿದ್ದಲ್ಲಿ ಸಹಾಯಧನ ನೀಡಲು ತೋಟಗಾರಿಕೆ ಇಲಾಖೆಯು ಅರ್ಜಿ ಆಹ್ವಾನಿಸಿದೆ.

WhatsApp Group Join Now
Telegram Group Join Now
Instagram Group Join Now

ಈ ಯೋಜನೆಯಡಿ ಅರ್ಹ ಫಲಾನುಭವಿ ರೈತರಿಗೆ ಪ್ರತಿ ಹೆಕ್ಟೇರ್‌ಗೆ ಗರಿಷ್ಠ ರೂ. 3,000 ರವರೆಗೆ ಸಹಾಯಧನ ಲಭ್ಯವಿರುತ್ತದೆ. ಸಹಾಯಧನ ಪಡೆಯಲು ಇಚ್ಛಿಸುವ ರೈತರು ಕನಿಷ್ಠ ರೂ. 10,000 ಮೊತ್ತದ ಮೈಲುತುತ್ತ ಖರೀದಿಸಿದ ಅಧಿಕೃತ ಬಿಲ್ಲನ್ನು ಹೊಂದಿರುವುದು ಕಡ್ಡಾಯವಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:

  • ಜಮೀನಿನ R.T.C (ಪಹಣಿ) ಪ್ರತಿ
  • ಆಧಾರ್ ಕಾರ್ಡ್ ಝೆರಾಕ್ಸ್ ಪ್ರತಿ
  • ಮೈಲುತುತ್ತ ಖರೀದಿಸಿದ ಬಿಲ್ಲು (ಒಟ್ಟು ಮೊತ್ತ ರೂ. 10,000 ಆಗಿರಬೇಕು)
  • ಬ್ಯಾಂಕ್ ಪಾಸ್‌ಬುಕ್ ಝೆರಾಕ್ಸ್ ಪ್ರತಿ
  • ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ (SC/ST) ಜಾತಿ ಪ್ರಮಾಣ ಪತ್ರದ ಝೆರಾಕ್ಸ್ ಪ್ರತಿ

ಆಸಕ್ತ ಹಾಗೂ ಅರ್ಹ ರೈತರು ಮೇಲ್ಕಂಡ ದಾಖಲೆಗಳೊಂದಿಗೆ ಕೂಡಲೇ ಇಲಾಖೆಯನ್ನು ಸಂಪರ್ಕಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಹೊಸನಗರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಪುಟ್ಟಾನಾಯ್ಕ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಹೊಸನಗರ ತೋಟಗಾರಿಕೆ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]