ಹೊಸನಗರ

ರಿಪ್ಪನ್‌ಪೇಟೆ: ಹರತಾಳು ಹಾಲಪ್ಪ ನೇತೃತ್ವದ ಪ್ರತಿಭಟನೆಗೆ ಮಣಿದ ಮೆಸ್ಕಾಂ – ಸಮಸ್ಯೆ ಪರಿಹಾರದ ಭರವಸೆ ಬೆನ್ನಲ್ಲೇ ಧರಣಿ ಅಂತ್ಯ!

Jayadevappa, the S.O. (Section Officer) of the Shivamogga District MESCOM department, visited the site of the indefinite protest in Ripponpete. He accepted a memorandum from the protesters and gave assurances that several of the issues raised would be resolved promptly; following this, the protest was called off.

Mescom RPT

ರಿಪ್ಪನ್‌ಪೇಟೆ: ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ತಲೆದೋರಿರುವ ಅನಿಯಮಿತ ವಿದ್ಯುತ್ ಪೂರೈಕೆ ಹಾಗೂ ಇನ್ನಿತರ ಸಮಸ್ಯೆಗಳನ್ನು ಖಂಡಿಸಿ, ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಮೆಸ್ಕಾಂ ಅಧಿಕಾರಿಗಳ ಭರವಸೆಯ ಮೇರೆಗೆ ಹಿಂಪಡೆಯಲಾಗಿದೆ.

WhatsApp Group Join Now
Telegram Group Join Now
Instagram Group Join Now

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಿವಮೊಗ್ಗ ಜಿಲ್ಲಾ ಮೆಸ್ಕಾಂ ಎಸ್.ಒ ಜಯದೇವಪ್ಪ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ, ಬೇಡಿಕೆಗಳನ್ನು ಶೀಘ್ರವೇ ಈಡೇರಿಸುವುದಾಗಿ ಭರವಸೆ ನೀಡಿದರು.

ಮೆಸ್ಕಾಂ ಅಧಿಕಾರಿಗಳು ನೀಡಿದ ಪ್ರಮುಖ ಭರವಸೆಗಳು:

  • ಕೆಟ್ಟುಹೋಗಿರುವ ಟ್ರಾನ್ಸ್‌ಫಾರ್ಮರ್‌ಗಳನ್ನು (ಟಿ.ಸಿ) ತಕ್ಷಣವೇ ಬದಲಾಯಿಸಿ ಹೊಸದನ್ನು ಅಳವಡಿಸುವುದು.
  • ನಿಗದಿತ ಲೋಡ್‌ಶೆಡ್ಡಿಂಗ್ ಸಮಯವನ್ನು ಹೊರತುಪಡಿಸಿ ಉಳಿದ ಸಮಯದಲ್ಲಿ ನಿರಂತರ ವಿದ್ಯುತ್ ಪೂರೈಕೆ ಮಾಡುವುದು ಹಾಗೂ ಸಿಬ್ಬಂದಿ ಕೊರತೆಯಾಗದಂತೆ ಕ್ರಮ ವಹಿಸುವುದು.
  • ಹಳೆಯ ವಿದ್ಯುತ್ ತಂತಿಗಳ ಬದಲಾವಣೆಗೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಆದರೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆಯಾಗಿರುವ ಕಾರಣ ಕಾಮಗಾರಿ ವಿಳಂಬವಾಗಿದೆ. ಈ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತಂದು ಹಂತ ಹಂತವಾಗಿ ಸಮಸ್ಯೆ ಬಗೆಹರಿಸಲಾಗುವುದು.

ಇದೇ ವೇಳೆ, ಸ್ಥಳೀಯ ಸೆಕ್ಷನ್ ಆಫೀಸರ್ ಬೇರೆಡೆಗೆ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಬದಲಿ ಅಧಿಕಾರಿ ಬರುವವರೆಗೂ ಅವರನ್ನು ಬಿಡುಗಡೆಗೊಳಿಸಬಾರದು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು, ಹೊಸ ಅಧಿಕಾರಿ ಅಧಿಕಾರ ಸ್ವೀಕರಿಸುವವರೆಗೂ ಹಾಲಿ ಅಧಿಕಾರಿಯನ್ನೇ ಇಲ್ಲಿಯೇ ಮುಂದುವರಿಸುವುದಾಗಿ ತಿಳಿಸಿದರು. ಈ ಎಲ್ಲ ಭರವಸೆಗಳ ಹಿನ್ನೆಲೆಯಲ್ಲಿ ಧರಣಿಯನ್ನು ಕೈಬಿಡಲಾಯಿತು.

ಈ ಸಂದರ್ಭದಲ್ಲಿ ಸಾಗರ ಮೆಸ್ಕಾಂ ಎಸ್.ಸಿ. ಚಂದ್ರಶೇಖರ್, ಮಾಜಿ ಸಚಿವ ಹರತಾಳು ಹಾಲಪ್ಪ, ಜಿ.ಪಂ. ಮಾಜಿ ಸದಸ್ಯರಾದ ಎ.ಟಿ. ನಾಗರತ್ನ ನಾಗರಾಜ್, ಹೊನಗೋಡು ರತ್ನಾಕರ್, ಹೊಸನಗರ ಪ.ಪಂ. ಮಾಜಿ ಸದಸ್ಯ ಹಾಲಗದ್ದೆ ಉಮೇಶ್, ತಾ.ಪಂ. ಮಾಜಿ ಅಧ್ಯಕ್ಷರಾದ ವೀರೇಶ್ ಆಲವಳ್ಳಿ, ನಾಗರತ್ನ ದೇವರಾಜ್, ಹೊಸನಗರ ಬಿಜೆಪಿ ಮಂಡಲ ಅಧ್ಯಕ್ಷ ಎನ್. ಸತೀಶ್, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಎನ್. ವರ್ತೇಶ್, ರಾಜ್ಯ ಜೆಡಿಎಸ್ ಮುಖಂಡ ಆರ್.ಎ. ಚಾಬುಸಾಬ್ ಸೇರಿದಂತೆ ರೇಖಾ ರವಿ ಕೆರೆಹಳ್ಳಿ, ಅಬ್ಬಿ ಕಿರಣ್, ಶಿವಾನಂದಪ್ಪ, ಆರ್.ಟಿ. ಗೋಪಾಲ್, ಮೆಣಸೆ ಆನಂದ, ಕೆ.ಬಿ. ಹೂವಪ್ಪ, ಲೇಖನ ಚಂದ್ರನಾಯ್ಕ್, ಎ. ಶ್ವೇತಾ, ಸೀತಾ, ಪದ್ಮಾ ಸುರೇಶ್, ಮಂಜುಳಾ ಕೇತಾರ್ಜಿರಾವ್, ದಾನಮ್ಮ, ನಾಗಾರ್ಜುನಸ್ವಾಮಿ, ಬುಕ್ಕಿವರೆ ರಾಜೇಶ್, ದೇವೇಂದ್ರಪ್ಪಗೌಡ ನೆವಟೂರು ಹಾಗೂ ನೂರಾರು ರೈತರು ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

error: Content is protected !!