Shivamogga

ಯಂತ್ರಕ್ಕೆ ಸಿಲುಕಿ ಸಂಪೂರ್ಣ ತುಂಡಾದ ಕೈ ಯಶಸ್ವಿ ಮರುಜೋಡಿಸಿದ ಸರ್ಜಿ ಆಸ್ಪತ್ರೆ ವೈದ್ಯರು !

SHIVAMOGGA | ಯಂತ್ರಕ್ಕೆ ಸಿಲುಕಿ ಸಂಪೂರ್ಣ ತುಂಡಾಗಿದ್ದ ಕೈ ಅನ್ನು ಶಸ್ತ್ರ ಚಿಕಿತ್ಸೆ ನಡೆಸಿ ಮರು ಜೋಡಿಸುವ ಮೂಲಕ ಅಪರೂಪದ ಸಾಧನೆ ಮಾಡುವಲ್ಲಿ ಇಲ್ಲಿನ ಸರ್ಜಿ ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರ ತಂಡ ಯಶಸ್ಸು ಸಾಧಿಸಿ ರೋಗಿಗೆ ಮರು ಜೀವನವನ್ನು ಕಲ್ಪಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಜಿಲ್ಲೆಯ ಸಾಮಿಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ 35 ವರ್ಷದ ಕಾರ್ಮಿಕರೊಬ್ಬರ ಕೈ ಆಕಸ್ಮಿಕವಾಗಿ ಮರ ಕೊಯ್ಯುವ ಯಂತ್ರಕ್ಕೆ ಸಿಲುಕಿ ಎರಡು ತುಂಡಾಗಿತ್ತು. ಸಂಪೂರ್ಣ ಕತ್ತರಿಸಿದ ಮುಂಗೈಯನ್ನು ಐಸ್ ಬಾಕ್ಸ್ ನಲ್ಲಿ ಇಟ್ಟುಕೊಂಡು ರೋಗಿಯು ಆಸ್ಪತ್ರೆಯ ಅಪಘಾತ ವಿಭಾಗಕ್ಕೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಸತತವಾಗಿ 7 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡಿದ್ದು, ಮುಂಗೈನ ಮಾಂಸಖಂಡ , ಮೂಳೆ ಹಾಗೂ ನರಗಳನ್ನು ಯಶಸ್ವಿಯಾಗಿ ಮರು ಜೋಡಿಸಿ ರೋಗಿಗೆ ಹೊಸ ಬದುಕು ಕೊಟ್ಟಿದ್ದಾರೆ. ರೋಗಿಗೆ ಉತ್ತಮ ಆರೈಕೆ ಮಾಡಿ ಒಂದು ವಾರದ ಬಳಿಕ ಡಿಸ್ಚಾರ್ಜ್ ಮಾಡಲಾಗಿತ್ತು, ಆ ನಂತರ ಕಾಲ ಕಾಲಕ್ಕೆ ತಪಾಸಣೆ ನಡೆಸಿ, ಇದೀಗ ಕೈ ಚಲನವಲನ ಚೆನ್ನಾಗಿದ್ದು, ರೋಗಿಯು ಚೇತರಿಸಿಕೊಂಡಿದ್ದಾರೆ. ಸರ್ಜಿ ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜನ್ ಡಾ.ಚೇತನ್ ಹಾಗೂ ಮೂಳೆ ರೋಗ ತಜ್ಞರಾದ ಡಾ.ಮಂಜುನಾಥ್ , ವೈದ್ಯಕೀಯ ಅಧೀಕ್ಷಕ ಹಾಗೂ ಅರಿವಳಿಕೆ ತಜ್ಞರಾದ ಡಾ.ವಾದಿರಾಜ ಕುಲಕರ್ಣಿ ಮತ್ತು ಡಾ.ಮೂರ್ಕಣಪ್ಪ, ಡಾ.ಸಂತೋಷ್, ಡಾ. ಅರ್ಜುನ್ ಅವರ ತಂಡ ಈ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದೆ.

ತುಂಡಾದ ಕೈ ಮರು ಜೋಡಣೆ ಹೇಗೆ ಸಾಧ್ಯ ?

ಅಪಘಾತ ಅಥವಾ ದುರಂತದಲ್ಲಿ ಕೈ- ಕಾಲು, ಬೆರಳು ಸೇರಿದಂತೆ ಯಾವುದೇ ಅಂಗಗಳು ಕತ್ತರಿಸಿದಾಗ ಅಯ್ಯೋ ಜೀವನ ಮುಗಿದೇ ಹೋಯ್ತು ಎಂದು ಚಿಂತಾಕ್ರಾಂತರಾಗುವುದಕ್ಕಿಂತ ಆ ಕ್ಷಣ ಸ್ವಲ್ಪ ಯೋಚಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಮತ್ತೆ ಹೊಸ ಬದಕನ್ನು ಕಂಡುಕೊಳ್ಳಬಹುದು. ಅವಘಡ ಸಂಭವಿಸಿ ಕೈ-ಕಾಲು, ಬೆರಳು ಸೇರಿದಂತೆ ಯಾವುದೇ ಅಂಗಗಳು ತುಂಡಾಗಿದ್ದರೆ ಭಯಪಡದೇ ಆತ್ಮಸ್ಥೈರ್ಯದೊಂದಿಗೆ ತುಂಡಾದ ಭಾಗವನ್ನು ಪ್ಲಾಸ್ಟಿಕ್ ಕವರ್ ನೊಂದಿಗೆ ಐಸ್ ಬಾಕ್ಸ್ ನಲ್ಲಿಟ್ಟು 6 ಗಂಟೆಯೊಳಗೆ ಆಸ್ಪತ್ರೆಗೆ ತಂದರೆ ಶಸ್ತ್ರ ಚಿಕಿತ್ಸೆ ಮಾಡಿ ಮರು ಜೋಡಿಸಲು ಸಾಧ್ಯವಿದೆ‌. ಆದರೆ ಇದು ಬಹಳಷ್ಟು ಜನರಿಗೆ ಸಾಧ್ಯವಾಗುವುದಿಲ್ಲ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಘಟನೆ ನಡೆದಾಗ ಭಯ ಭೀತರಾಗಿ ಕಟ್ ಆದ ಭಾಗವನ್ನು ತರದೇ ಮರೆತು ಆಸ್ಪತ್ರೆಗೆ ಬರುವ ಸಾಧ್ಯತೆಗಳೇ ಹೆಚ್ಚು. ಇಲ್ಲವೆ ಬಹಳ ತಡವಾಗಿ ಬಂದರೆ ತುಂಡಾದ ಭಾಗದ ಮಾಂಸ ಖಂಡಗಳು ಕೊಳೆತಂತಾಗುತ್ತವೆ, ಜೀವಕೋಶಗಳು ಸಾಯುತ್ತವೆ, ಹಾಗಾಗಿ ಚಿಕಿತ್ಸೆ ಮಾಡಿದರೂ ಯಶಸ್ವಿ ಆಗುವುದಿಲ್ಲ. ಆದರೆ ಈ ಘಟನೆಯಲ್ಲಿ ರೋಗಿಯು ಎಚ್ಚೆತ್ತುಕೊಂಡು ಸಕಾಲಕ್ಕೆ ತುಂಡಾದ ಕೈಯೊಂದಿಗೆ ಬಂದಿದ್ದರಿಂದ 7 ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ ಮರು ಜೋಡಿಸಲು ಸಾಧ್ಯವಾಗಿದೆ.

ತುಂಡಾದ ಭಾಗಗಳನ್ನು ಯಾವುದೇ ಕಾರಣಕ್ಕೂ ನೇರವಾಗಿ ನೀರಿನಲ್ಲಿ ಅಥವಾ ಐಸ್ ಬಾಕ್ಸ್ ನೊಳಗೆ ಇಟ್ಟುಕೊಂಡು ಬರಬಾರದು. ಬದಲಾಗಿ ಪ್ಲಾಸ್ಟಿಕ್ ಕವರ್ ನಲ್ಲಿಟ್ಟು ಐಸ್ ಬಾಕ್ಸ್ ನಲ್ಲಿಟ್ಟು ತರಬೇಕು, ಹೀಗೆ ಮಾಡಿದಾಗ ಜೀವಕೋಶಗಳು ಸಾಯುವುದಿಲ್ಲ, ಅಂಗಾಂಗಗಳ ಮರು ಜೋಡಣೆ ಮಾಡುವ ಸೌಕರ್ಯ ಹಾಗೂ ಅತ್ಯಾಧುನಿಕ ಶಸ್ತ್ರ ಚಿಕಿತ್ಸಾ ಘಟಕವನ್ನು ಸರ್ಜಿ ಆಸ್ಪತ್ರೆಯು ಹೊಂದಿದೆ.

Read More

Post Office Scholarship:ಈ ವಿದ್ಯಾರ್ಥಿಗಳಿಗೆ ಸಿಗಲಿದೆ 6,000 ವಿದ್ಯಾರ್ಥಿವೇತನ !

Post Office RD:ಕೇವಲ 5000 ರೂ ಈ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ಸಿಗಲಿದೆ ಪೂರ್ತಿ 8 ಲಕ್ಷ !

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>