ಕಡವೆ ಶಿಕಾರಿ ಮಾಡಿ ಮಾಂಸ ತಯಾರಿಸುತ್ತಿದ್ದವನ ಬಂಧನ

Written by malnadtimes.com

Published on:

ಚಿಕ್ಕಮಗಳೂರು ; ಕಡವೆ ಶಿಕಾರಿ ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಅರಣ್ಯ ಸಂಚಾರಿ ದಳ ವಾಹನ ಸಹಿತ ಎರಡು ಬಂದೂಕು ವಶಪಡಿಸಿಕೊಂಡಿದೆ.

WhatsApp Group Join Now
Telegram Group Join Now
Instagram Group Join Now

ಚಿಕ್ಕಮಗಳೂರು ವಲಯದ ಅತ್ತಿಗಿರಿ ಸೆಕ್ಷನ್, ತೋಗರಿಹಂಕಲ್ ಗ್ರಾಮದ ಕೂತನ್ಕುಲ್ ಎಸ್ಟೇಟ್ ನಲ್ಲಿ ಭಾನುವಾರ ನಸುಕಿನಲ್ಲಿ ತೋಟದ ರೈಟರ್ ದೇವಯ್ಯ ಕಡವೆ ಶಿಕಾರಿ ಮಾಡಿದ್ದ. ಶಿಕಾರಿ ಬಳಿಕ ಮಾಂಸವನ್ನು ತುಂಡು ಮಾಡುತ್ತಿದ್ದಾಗ ಅರಣ್ಯ ಸಂಚಾರಿ ದಳದವರು ದಾಳಿ ಮಾಡಿ ದೇವಯ್ಯರನ್ನು ಬಂಧಿಸಿದ್ದಾರೆ.

ಅಂದಾಜು 40 ಕೆ.ಜಿ ಮಾಂಸ ಮತ್ತು ಚರ್ಮ, ಚೂರಿ ಹಾಗೂ ಬೇಟೆಗೆ ಬಳಸುತ್ತಿದ್ದ 2 ಬಂದೂಕುಗಳನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ವನ್ಯಜೀವಿ ಹಾಗೂ ಅರಣ್ಯ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿದ್ದಾರೆ.

Leave a Comment