AJJAMPURA ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯಲ್ಲಿದ್ದ 5 ವರ್ಷದ ಬಾಲಕಿ ಅನುಮಾನಾಸ್ಪದವಾಗಿ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದ ರೈಲ್ವೇ ಸ್ಟೇಷನ್ ಬಳಿ ನಡೆದಿದೆ.
ಬಾಲಕಿಯ ಕೆನ್ನೆ ಹಾಗೂ ಮುಖದ ಮೇಲೆ ಗಾಯದ ಗುರುತುಗಳಿದ್ದು, ಕಿವಿಯಲ್ಲಿದ್ದ ಓಲೆ, ಕಾಲಿನಲ್ಲಿದ್ದ ಚೈನು ನಾಪತ್ತೆಯಾಗಿದೆ ಎನ್ನಲಾಗಿದೆ. ಒಡವೆ ಕದ್ದವರೇ ಬಾಲಕಿಯನ್ನು ಹತ್ಯೆ ಮಾಡಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ.

ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದ ಮಂಜುನಾಥ ಮತ್ತು ಮಂಗಳ ದಂಪತಿಯ ಐದು ವರ್ಷದ ಮಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ತಂದೆ ತಾಯಿ ಇಬ್ಬರೂ ಕೆಲಸಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ.

ತೆಂಗಿನಕಾಯಿ ಮಂಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಮಂಜುನಾಥ ಹಾಗೂ ಮಂಗಳ ದಂಪತಿಯು ಮಗುವಿಗೆ ಜ್ವರವಿದ್ದ ಹಿನ್ನೆಲೆ ಮಗುವನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ ಊಟಕ್ಕೆ ಬಂದ ವೇಳೆ ಮಗಳು ಮೃತಪಟ್ಟಿರುವುದು ತಿಳಿದಿದೆ.

ಬಾಲಕಿಯ ಸಾವು ಅನುಮಾನದಿಂದ ಕೂಡಿದ್ದು, ಘಟನಾ ಸ್ಥಳಕ್ಕೆ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶ್ವಾನದಳ ಹಾಗೂ ಬೆಳಚ್ಚು ತಜ್ಞರ ತಂಡ ಪರಿಶೀಲನೆ ನಡೆಸಿದ್ದು, ಈ ಘಟನೆ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.