
ಶ್ರದ್ಧೆ ಮತ್ತು ಭಕ್ತಿಯಿಂದ ಗಣೇಶೋತ್ಸವ ಆಚರಿಸುವುದು ಅಗತ್ಯವಿದೆ: ಕವಿತಾ ಆಚಾರ್ಯ ಮುದೂರು
ರಿಪ್ಪನ್‌ಪೇಟೆ: ಗಣೇಶ ಚತುರ್ಥಿಯು ಯಾವುದೇ ನಿರ್ದಿಷ್ಟ ಜಾತಿ ಅಥವಾ ಧರ್ಮಕ್ಕೆ ಸೀಮಿತವಾಗದೆ, ಸಮಾಜವನ್ನು ಒಗ್ಗೂಡಿಸುವ ಪವಿತ್ರ ಹಬ್ಬವಾಗಿದೆ ಎಂದು ಕುಂದಾಪುರದ ಕವಿತಾ ಆಚಾರ್ಯ ಮುದೂರು ಅಭಿಪ್ರಾಯಪಟ್ಟರು.

ರಿಪ್ಪನ್‌ಪೇಟೆ: ಗಣೇಶ ಚತುರ್ಥಿಯು ಯಾವುದೇ ನಿರ್ದಿಷ್ಟ ಜಾತಿ ಅಥವಾ ಧರ್ಮಕ್ಕೆ ಸೀಮಿತವಾಗದೆ, ಸಮಾಜವನ್ನು ಒಗ್ಗೂಡಿಸುವ ಪವಿತ್ರ ಹಬ್ಬವಾಗಿದೆ ಎಂದು ಕುಂದಾಪುರದ ಕವಿತಾ ಆಚಾರ್ಯ ಮುದೂರು ಅಭಿಪ್ರಾಯಪಟ್ಟರು.

ರಿಪ್ಪನ್‌ಪೇಟೆ : ನಾಡಕಛೇರಿ ಹಿಂಭಾಗದ ಬರುವೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಇರುವ, ರೆವಿನ್ಯೂ ಇನ್ಸ್ಪೆಕ್ಟರ್ ವಸತಿ ನಿವೇಶನಕ್ಕಾಗಿ ಮೀಸಲಿಟ್ಟ ಸರ್ಕಾರಿ ಜಾಗವನ್ನು ಪ್ರಭಾವಿ ವ್ಯಕ್ತಿಯೊಬ್ಬರು ಕಬಳಿಸಲು ಯತ್ನಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ವತಿಯಿಂದ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ತಿಂಗಳ ಕಾಲ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

ಹೊಸನಗರ: ಸ್ಥಳೀಯ ತಾಲೂಕು ಕಚೇರಿಯಲ್ಲಿ ಕಳೆದ ಮೂರು ತಿಂಗಳಿಂದ ಬಂದ್ ಆಗಿರುವ ಆಧಾರ್ ನೋಂದಣಿ ಕೇಂದ್ರವನ್ನು ಒಂದು ವಾರದೊಳಗೆ ಮರುಆರಂಭಿಸದಿದ್ದರೆ ತಾಲೂಕು ಕಚೇರಿಯ ಎದುರು ಪಕ್ಷಾತೀತವಾಗಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಹಾಲಗದ್ದೆ ಉಮೇಶ್ ಎಚ್ಚರಿಸಿದ್ದಾರೆ.

ಹೊಸನಗರ ; ಇಲ್ಲಿನ ನೆಹರು ರಸ್ತೆಯಲ್ಲಿರುವ ಕೆ.ಎಸ್. ವಿನಾಯಕ್ ಅವರ ಮನೆಯಲ್ಲಿ ಗಣೇಶ ಚತುರ್ಥಿಯ ಅಂಗವಾಗಿ ‘ವಂದೇ ಮಾತರಂ ಗಣೇಶ’ ಶೀರ್ಷಿಕೆಯಡಿ ವಿಶಿಷ್ಟ ಗಣಪತಿ ಮೂರ್ತಿಗಳ ಪ್ರದರ್ಶನ ಏರ್ಪಡಿಸಲಾಗಿದೆ. 'ವಿನಾಯಕ ಲೋಕ' ಹೆಸರಿನ ಈ ಪ್ರದರ್ಶನದಲ್ಲಿ 150ಕ್ಕೂ ಹೆಚ್ಚು ವೈವಿಧ್ಯಮಯ ಹಾಗೂ ಆಕರ್ಷಕ ಗಣೇಶ ವಿಗ್ರಹಗಳನ್ನು ಸಾರ್ವಜನಿಕರ ವೀಕ್ಷಣೆಗೆ ಇಡಲಾಗಿದೆ.

ಹೊಸನಗರ : ಪ್ರಜೆಗಳೇ ಆಡಳಿತದ ಕೇಂದ್ರಬಿಂದುವಾಗಿರುವ ಪ್ರಜಾಪ್ರಭುತ್ವದ ಮೌಲ್ಯಗಳು, ಹಕ್ಕುಗಳು ಹಾಗೂ ಜವಾಬ್ದಾರಿಗಳ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಸದುದ್ದೇಶದಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ ಎಂದು ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಪವನ್‌ಕುಮಾರ್ ತಿಳಿಸಿದರು.

ವೈದ್ಯರು, ಪ್ರಾಧ್ಯಾಪಕರು ಹಾಗೂ ನ್ಯಾಯಮೂರ್ತಿಗಳ ಮಾದರಿಯಲ್ಲಿ ಶಿಕ್ಷಕರ ಹೆಸರಿನ ಮುಂದೆಯೂ 'Tr' ಎಂದು ಬಳಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೀಡಿರುವ ಸೂಚನೆಯನ್ನು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಸ್ವಾಗತಿಸಿದೆ. ಇದೇ ನಿಟ್ಟಿನಲ್ಲಿ, ದೇಶದ ಬೆನ್ನೆಲುಬಾಗಿರುವ ರೈತರನ್ನು ಗೌರವಿಸಲು ಅವರ ಹೆಸರಿನ ಮುಂದೆಯೂ 'Fr' (Farmer) ಎಂಬ ಅಂಕಿತನಾಮವನ್ನು ಸೇರಿಸುವಂತೆ ಟ್ರಸ್ಟ್‌ನ ಟ್ರಸ್ಟಿ ಕಲ್ಲೂರು ಮೇಘರಾಜ್ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಹೊಸನಗರ: ಪೊಲೀಸ್ ಇಲಾಖೆಯ ಕರ್ತವ್ಯದ ಒತ್ತಡದ ನಡುವೆಯೂ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವ, 'ಖಾಕಿ ಕವಿ' ಎಂದೇ ಖ್ಯಾತರಾಗಿರುವ ಹೊಸನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಮಂಜುನಾಥ್ ಅವರ 11ನೇ ಕವನ ಸಂಕಲನ 'ಆಶಾಸುಂದರಿ' ಇತ್ತೀಚೆಗೆ ಬಿಡುಗಡೆಯಾಯಿತು.

ರಿಪ್ಪನ್‌ಪೇಟೆ: ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಸೇವಾ ಸಮಿತಿಯ ವತಿಯಿಂದ ಕಳೆದ 59 ವರ್ಷಗಳಿಂದ ಅತ್ಯಂತ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿರುವ 'ಹಿಂದೂ ಮಹಾಗಣಪತಿ ಉತ್ಸವ'ವು ಈ ವರ್ಷವೂ ಅದ್ದೂರಿಯಾಗಿ ನಡೆಯಲಿದ್ದು, ಹಬ್ಬದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ.

ಸತ್ಯ, ಧರ್ಮ, ಕರ್ತವ್ಯ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾಗಿರುವ ಶ್ರೀಕೃಷ್ಣನ ಜೀವನ ಮತ್ತು ಭಗವದ್ಗೀತೆಯ ಸಂದೇಶಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ರವೀಂದ್ರ ಬಲ್ಲಾಳ್ ಅಭಿಪ್ರಾಯಪಟ್ಟರು.