
ಕಸ್ತೂರಿ ರಂಗನ್ ವರದಿ ರದ್ದತಿಗೆ ಹೋರಾಟ ಮುಂದುವರೆಯಲಿದೆ: ಬೇಳೂರು ಗೋಪಾಲಕೃಷ್ಣ
ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆ ರದ್ದಾಗುವವರೆಗೆ ಹೋರಾಟ ಮುಂದುವರೆಯಲಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ತೀರ್ಥಹಳ್ಳಿಯಲ್ಲಿ ಮಾತನಾಡಿದ ಅವರು, ವರದಿ ಜಾರಿಯಾದರೆ ಮಲೆನಾಡಿನ ರೈತರು, ಶರಾವತಿ ಸಂತ್ರಸ್ತರು ಮತ್ತು ಜನಸಾಮಾನ್ಯರ ಬದುಕಿಗೆ ತೊಂದರೆ ಆಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.









