
ಕಸ್ತೂರಿ ರಂಗನ್ ವರದಿ ವಿಚಾರ: ಮೊದಲು 10 ಜಿಲ್ಲೆಗಳಲ್ಲಿ ಜಂಟಿ ಸರ್ವೇ ಮಾಡಿಸಿ ಎಂದು ಸಿಎಂಗೆ ಬಿ.ವೈ. ರಾಘವೇಂದ್ರ ಮನವಿ
ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆ ಪಶ್ಚಿಮ ಘಟ್ಟ ವ್ಯಾಪ್ತಿಯ ಜನರಲ್ಲಿ ಆತಂಕ ಮೂಡಿಸಿದೆ. ವರದಿ ಕುರಿತು ಸಭೆ ಕರೆಯುವುದಕ್ಕೂ ಮೊದಲು ರಾಜ್ಯದ 10 ಜಿಲ್ಲೆಗಳಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಗಳ ಜಂಟಿ ಸರ್ವೇ ನಡೆಸಿ ವಾಸ್ತವ ಸ್ಥಿತಿ ತಿಳಿಯಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದಾರೆ.









