Hosanagara

ಪ್ರತಿಭೆಯನ್ನು ಗುರುತಿಸಲು ಸೂಕ್ತ ವೇದಿಕೆ ಪ್ರತಿಭಾ ಕಾರಂಜಿ ; ಬೇಳೂರು ಗೋಪಾಲಕೃಷ್ಣ

ಹೊಸನಗರ ; ಪ್ರತಿಭಾ ಕಾರಂಜಿಯೂ ಮಕ್ಕಳಲ್ಲಿ ಅಡಗಿರುವ ಬಹುಮಖ ಪ್ರತಿಭೆಯನ್ನು ಗುರುತಿಸಲು ಸರ್ಕಾರ ಮಾಡಿದ ಮಹತ್ತರ ಯೋಜನೆಯಾಗಿದ್ದು ವಿದ್ಯಾರ್ಥಿಗಳ ಜ್ಞಾನದ ಬೆಳಕು ನೀಡುವ ಉದ್ದೇಶಕ್ಕೆ ಪ್ರತಿಭಾ ಕಾರಂಜಿಯಂಥಹ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೊಸನಗರ-ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇಲ್ಲಿನ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಛೇರಿ ಹೊಸನಗರ ಇವರ ಸಂಯುಕ್ತಾಶ್ರಯದಲ್ಲಿ ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳ ಚಟುವಟಿಕೆಗಳನ್ನು ಹೊರ ತರಲು ಸರ್ಕಾರ ಅನೇಕ ರೀತಿಯ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಕಲಿಕೆಯ ಕಡೆಗೆ ಹೆಚ್ಚಿನ ಗಮನಹರಿಸಿ ವಿದ್ಯಾರ್ಥಿಗಳನ್ನು ದೇಶದ ಉತ್ತಮ ಪ್ರಜೆಯನ್ನಾಗಿ ಮಾಡಲು ಪೋಷಕರು, ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿಗಳಿಗೆ ಇಲಾಖೆಯಿಂದ ನೀಡುವ ಎಲ್ಲಾ ಸವಲತ್ತುಗಳನ್ನು ಪಡೆದು ಉತ್ತಮ ಕಲಿಕೆಯನ್ನು ಅಂತರ್ಗತ ಮಾಡಿಕೊಳ್ಳುವಂತೆ ಈ ಸಂದರ್ಭದಲ್ಲಿ ಕಿವಿಮಾತು ಹೇಳಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಇಂದಿನ ಮಕ್ಕಳಲ್ಲಿ ಬಹಳಷ್ಟು ಪ್ರತಿಭೆಗಳಿವೆ ಅದನ್ನು ಹೊರ ಹಾಕಲು ಪ್ರತಿಭಾ ಕಾರಂಜಿಯಂತಹ ವೇದಿಕೆ ಸೂಕ್ತವಾಗಿದೆ. ಈ ಮೂಲಕ ಮಕ್ಕಳು ಟಿ.ವಿ ಚಾನಲ್‌ಗಳಲ್ಲೂ ತಮ್ಮ ಪ್ರತಿಭೆಗಳನ್ನು ಹೊರ ಹಾಕುತ್ತಿದ್ದಾರೆ. ನಮ್ಮ ದೇಶ, ರಾಜ್ಯದಲ್ಲಿ ಸಾಕಷ್ಟು ಪ್ರತಿಭಾವಂತರಿದ್ದು ಅದನ್ನು ಹೊರ ಹಾಕಲು ಸೂಕ್ತ ವೇದಿಕೆ ಇದಾಗಿದೆ‌. ಪ್ರತಿಭೆಗಳನ್ನು ಉತ್ತಮ ಕೆಲಸಗಳಿಗೆ ಬಳಸಿಕೊಂಡಲ್ಲಿ ತಾವು ಬಲಗೊಳ್ಳುವುದರ ಜೊತೆಗೆ ದೇಶವನ್ನು ಬಲಿಷ್ಠಗೊಳಿಸಬಹುದು ಎಂದರು.

ಇಂದಿನ ಪೋಷಕರು ತಮ್ಮ ಮಕ್ಕಳು ಹೆಚ್ಚು ಅಂಕ ಪಡೆಯಬೇಕು ಎಂಬ ದೃಷ್ಠಿಯಿಂದ ಶಾಲೆಯಿಂದ ಬಂದ ತಕ್ಷಣ ಓದು-ಓದು ಎಂದು ಒತ್ತಾಯಿಸುತ್ತಾರೆ. ಆದರೆ ಆ ಮಕ್ಕಳಿಗೆ ದಿನ ಒಂದು ಗಂಟೆಯಾದರೂ ಆಟಕ್ಕೆ ಸಮಯ ನೀಡಿ. ಓದು ಒಂದೇ ಮುಖ್ಯವಲ್ಲ, ಓದಿನ ಜೊತೆಗೆ ಆಟೋಟಗಳು ಮುಖ್ಯವಾಗಿರುತ್ತದೆ. ಮಕ್ಕಳು ಆರೋಗ್ಯವಂತರಾಗಿರಬೇಕಾದರೆ ಓದು ಎಷ್ಟು ಮುಖ್ಯವೋ ಆರೋಗ್ಯವೋ ಅಷ್ಟೆ ಮುಖ್ಯವಾಗಿದೆ. ಪತ್ರಿಯೊಬ್ಬ ಪೋಷಕರು ಮಕ್ಕಳಿಗೆ ಓದಿನ ಜೊತೆಗೆ ಆಟೋಟಕ್ಕೂ ಸಮಯ ನೀಡಿ ಎಂದರು.

ಈ ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ರಮೇಶ್ ನರ‍್ಲೆ, ಮುಖ್ಯಾಧಿಕಾರಿ ಹರೀಶ್, ನೌಕರರ ಸಂಘದ ಅಧ್ಯಕ್ಷ ಸೋಮಶೇಖರ ಬಂಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಆರ್. ಸುರೇಶ್, ತಾಲ್ಲೂಕು ದೈಹಿಕ ಶಿಕ್ಷಕ ಪರಿವೀಕ್ಷಕ ವಿನಯ್ ಹೆಗಡೆ ಕರ್ಕಿ, ಶಿಕ್ಷಕ ಹರೀಶ್ ಎಂ.ಎನ್, ತಾಲ್ಲೂಕು ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ಕರಿಬಸಪ್ಪ, ಎಂ.ಪಿ ಸುರೇಶ್, ದುಮ್ಮ ವಿನಯ್‌ಕುಮಾರ್, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ಜ್ಯೋತಿ ಚಂದ್ರಮೌಳಿ, ಸತೀಶ್, ಧನಂಜಯ, ಮಾಲತೇಶ್ ಪೃಥ್ವಿರಾಜ್, ಪುಟ್ಟಸ್ವಾಮಿ, ವೆಂಕಟೇಶ್ ಶೇಷಾಚಲ ಜಿ.ನಾಯ್ಕ್, ಎಂ ರಂಗನಾಥ್, ಶಿಕ್ಷಣಾಧಿಕಾರಿ ಗಣೇಶ್ ವೈ, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಎಸ್‌ಡಿಎಂಸಿಯ ಎಲ್ಲಾ ಅಧ್ಯಕ್ಷ, ಸದಸ್ಯರುಗಳು, ವಿವಿಧ ಶಾಲೆಗಳಿಂದ ಆಗಮಿಸಿದ ಶಿಕ್ಷಕರು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>