ರಿಪ್ಪನ್ಪೇಟೆ: ಕೋಲಾರದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಬೆಂಗಳೂರು ವಿಭಾಗ ಮಟ್ಟದ ವಾಲಿಬಾಲ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಪಟ್ಟಣದ ಶ್ರೀ ಬಸವೇಶ್ವರ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ತನ್ಮಯ್ ಆರ್. ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಪ್ರಸ್ತುತ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ತನ್ಮಯ್, ಬಿಳಕಿ ಗ್ರಾಮದ ರವಿಕುಮಾರ್ ಎಂ.ಆರ್. ಹಾಗೂ ಪುಷ್ಪಾ ಕೆ.ಬಿ. ದಂಪತಿಯ ಪುತ್ರನಾಗಿದ್ದು, ಗ್ರಾಮೀಣ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದಾನೆ.
ವಿದ್ಯಾರ್ಥಿಯ ಈ ಕ್ರೀಡಾ ಸಾಧನೆಗೆ ಆನಂದಪುರ ಮುರುಘಾರಾಜೇಂದ್ರ ಮಠದ ಡಾ. ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮೀಜಿ ಆಶೀರ್ವದಿಸಿ ಶುಭ ಕೋರಿದ್ದಾರೆ. ಜೊತೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

