ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿಸಿ ; ಬೇಳೂರು ಗೋಪಾಲಕೃಷ್ಣ

Written by malnadtimes.com

Published on:

ಹೊಸನಗರ ; ಮಕ್ಕಳಿಗೆ ವಿದ್ಯೆಯನ್ನು ಕಲಿಸಿದರೆ ಸಾಲದು ಅದರ ಜೊತೆಗೆ ಸಂಸ್ಕಾರ ಕಲಿಸಿದರೇ ಮಾತ್ರ ಈ ಸಮಾಜದಲ್ಲಿ ಒಬ್ಬ ಒಳ್ಳೆಯ ವ್ಯಕ್ತಿಯಾಗಿ ರೂಪುಗೊಳ್ಳುತ್ತಾರೆ ಎಂದು ಹೊಸನಗರ-ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

WhatsApp Group Join Now
Telegram Group Join Now
Instagram Group Join Now

ಮಣಸಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ 25ನೇ ವರ್ಷದ ಬೆಳ್ಳಿ ಹಬ್ಬದ ಸಂಭ್ರಮವನ್ನು ಶಾಲೆಯ ಆವರಣದಲ್ಲಿ ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ಮಕ್ಕಳ ಏಳಿಗೆಗೆ ಪೋಷಕರ ಮತ್ತು ಶಿಕ್ಷಕರ ಪಾತ್ರ ಅತ್ಯಂತ ಹಿರಿದಾಗಿದ್ದು, ಪೋಷಕರಾದವರು ಅತೀ ಮುದ್ದು ಮಾಡಿ ಮಕ್ಕಳು ಹೇಳಿದ್ದೆಲ್ಲ ಕೊಡಿಸಿದರೆ ಸಾಲದು ಗುರು-ಹಿರಿಯರಿಗೆ ಗೌರವ ನೀಡುವುದನ್ನು ಕಲಿಸಬೇಕು. ವಿದ್ಯೆಯ ಜೊತೆಗೆ ಈ ಸಮಾಜದಲ್ಲಿ ಬದುಕುವ ದಾರಿಯನ್ನು ಕಲಿಸಬೇಕಾಗುತ್ತದೆ. ಅದಕ್ಕಾಗಿ ಶಿಕ್ಷಕರ ಹಾಗೂ ಪೋಷಕರ ಪಾತ್ರ ಹಿರಿದಾಗಿರುತ್ತದೆ. ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ? ಎಂಬ ಗಾದೆ ಮಾತಿನಂತೆ ಪ್ರೌಢ ಶಾಲೆಗೆ ಬರವ ಒಳಗೆ ಪ್ರಾಥಮಿಕ ಶಾಲೆಯಲ್ಲಿಯೇ ಒಳ್ಳೆಯ ಗುಣ ನಡೆತೆಯನ್ನು ಕಲಿಸಬೇಕೆಂದರು.

ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ನೀಗಿಸಲು ಸರ್ಕಾರ ಪ್ರತಿದಿನ ಮಕ್ಕಳಿಗೆ ಮೊಟ್ಟೆ, ಬಾಳೆ ಹಣ್ಣು, ನೀಡುತ್ತಿದೆ ರಾಗಿ ಮಾಲ್ಟ್, ಹಾಲು, ಬಿಸಿಯೂಟದಂತಹ ಯೋಜನೆಗಳ ಮೂಲಕ ಮಕ್ಕಳ ಸರ್ವಾಂಗೀಣ ವಿಕಸನಕ್ಕೆ ಶ್ರಮಿಸುತ್ತಿದೆ ಎಲ್ಲ ಮಕ್ಕಳು ಸರ್ಕಾರ ನೀಡುತ್ತಿರುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಈ ಶಾಲೆಗೆ ಅಗತ್ಯವಿರುವ ರಂಗಮಂದಿರವನ್ನು ನನ್ನ ಅವಧಿಯೊಳಗೆ ನಿರ್ಮಿಸಿಕೊಡುವುದಾಗಿ ವೇದಿಕೆಯಲ್ಲಿ ಘೋಷಿಸಿದರು.

ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ್, ಮೇಲಿನಬೆಸಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ, ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಸೋಮಶೇಖರ ಬಂಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ, ಪುಟ್ಟಸ್ವಾಮಿ, ಪುಷ್ಪ, ಚಂದ್ರಕಲಾ, ಸವಿತಾ ನಾಯ್ಕ್, ರೂಪ.ಕೆ.ಕೆ, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಗಗ್ಗ ಬಸವರಾಜ್, ಮಾಸ್ತಿಕಟ್ಟೆ ಸುಬ್ರಮಣ್ಯ, ಎಸ್‌ಡಿಎಂಸಿ ಸದಸ್ಯರು ಪೋಷಕರು ಹಳೇ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ವರ್ಗಾವಣೆಗೊಂಡ ಶಿಕ್ಷಕರುಗಳಿಗೆ ಎಸ್‌ಡಿಎಂಸಿ ಮಾಜಿ ಅಧ್ಯಕ್ಷರು, ಸದಸ್ಯರುಗಳಿಗೆ ಮತ್ತು ಶಾಲೆಗೆ ದಾನ ನೀಡಿದ ದಾನಿಗಳನ್ನು ಸನ್ಮಾನಿಸಿ, ಆಟೋಟಗಳಲ್ಲಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

Leave a Comment