Accident

ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಶಿಕ್ಷಕ ಅಪಘಾತಕ್ಕೆ ಬಲಿ !

ಹೊಸನಗರ : ತಾಲ್ಲೂಕಿನ ಆಲಗೇರಿಮಂಡ್ರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಡ್ತಿ ಮುಖ್ಯ ಶಿಕ್ಷಕ ನಾರಾಯಣಪ್ಪ (58) ಮಂಗಳವಾರ ಸಂಜೆ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇವರು ಸಾಗರ ತಾಲ್ಲೂಕಿನ ನೇದರವಳ್ಳಿ ಗ್ರಾಮದ ನಿವಾಸಿಯಾಗಿದ್ದು, ಶಾಲೆಯ ಕರ್ತವ್ಯ ಮುಗಿಸಿ ತಮ್ಮ ಮನೆಗೆ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಮಾಹಿತಿಯ ಪ್ರಕಾರ, ನಾರಾಯಣಪ್ಪ ಅವರು ನೇದರವಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ತಮ್ಮ ಬೈಕ್‌ನಲ್ಲಿ ಸಾಗುತ್ತಿದ್ದರು. ಈ ವೇಳೆ ಎದುರಿನಿಂದ ಬರುತ್ತಿದ್ದ ಮತ್ತೊಂದು ಬೈಕ್ ಅವರ ಬೈಕ್‌ಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಅವರು ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣವೇ ಅವರನ್ನು ಸಾಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು.

ಆದರೆ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ನಾರಾಯಣಪ್ಪ ಅವರು ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>