SAGARA ; ಬೈಕಿನಲ್ಲಿ ಶಾಲೆಗೆ ತೆರಳುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ನರಸೀಪುರ ಗ್ರಾಮದ ಸರ್ಕಾರಿ ಶಾಲಾ ಶಿಕ್ಷಕ ಮಂಜುನಾಥ್ (57) ಮೃತಪಟ್ಟ ಶಿಕ್ಷಕ. ಇಂದು ಬೆಳಗ್ಗೆ ಜಂಬೆಕೊಪ್ಪ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸಲು ಬೈಕಿನಲ್ಲಿ ತೆರಳುತ್ತಿರುವ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.

ಮಂಜುನಾಥ್ ಅವರು ಹೆಂಡತಿ, ಓರ್ವ ಪುತ್ರ, ಪುತ್ರಿ, ಹಾಗೂ ಅಪಾರ ಶಿಕ್ಷಕ ವರ್ಗದವರನ್ನು ಅಗಲಿದ್ದಾರೆ. ಶಿಕ್ಷಕ ಮಂಜುನಾಥ್ ಮನೆಗೆ ಸಾಗರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.
ಇತ್ತೀಚೆಗೆ ಸಾಗರ ತಾಲೂಕು ಸಿರಿವಂತೆಯ ಸರ್ಕಾರಿ ಶಾಲೆಯ ಶಿಕ್ಷಕಿ ಶಿವಮೊಗ್ಗದ ಡಯಟ್ ನಲ್ಲಿ ನಡೆಯುವ ತರಬೇತಿಗಾಗಿ ತೆರಳುವ ಅವಸರದಲ್ಲಿ ಅಪಘಾತವಾಗಿ ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ಸಂಭವಿಸಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.