ರಿಪ್ಪನ್ಪೇಟೆ ; ನಂದಿಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೆ.ಬಿ. ದಾನೇಶಪ್ಪಗೆ 2025-26ನೇ ಸಾಲಿನ ಹೊಸನಗರ ತಾಲ್ಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಭಾರತ ರತ್ನ ಡಾ.ಎಸ್.ರಾಧಾಕೃಷ್ಣನ್ ರವರ 137ನೇ ಜನ್ಮ ದಿನಾಚರಣೆಯ ಅಂಗವಾಗಿ ಶಿಕ್ಷಕರ ದಿನಾಚರಣೆ ಮತ್ತು ಉತ್ತಮ ಶಿಕ್ಷಕರಿಗೆ ಸನ್ಮಾನ ಸಮಾರಂಭದಲ್ಲಿ ಹೊಸನಗರ ತಾಲ್ಲೂಕಿನ ನಂದಿಮನೆ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕ ಕೆ.ಬಿ. ದಾನೇಶಪ್ಪಗೆ ಅತ್ಯುತ್ತಮ ಪ್ರಶಸ್ತಿ ನೀಡಿ ಗೌರವಿಸಿರುವುದನ್ನು ಗ್ರಾಮಸ್ಥರು ಮತ್ತು ಎಸ್.ಡಿ.ಎಂ.ಸಿಯವರು ಅಭಿನಂದಿಸಿದ್ದಾರೆ.
ಮಂಡ್ರೊಳ್ಳಿ ಶಾಲೆಗೆ ಕಬಡ್ಡಿಯಲ್ಲಿ ದ್ವಿತೀಯ ಸ್ಥಾನ
ಹೊಸನಗರ ; ಪಟ್ಟಣದ ನೆಹರು ಕ್ರೀಡಾಂಗಣದಲ್ಲಿ ಶಿಕ್ಷಣ ಇಲಾಖೆ ನಡೆಯುತ್ತಿರುವ 14 ವರ್ಷ ವಯೋಮಿತಿ ಒಳಗಿನ ಶಾಲಾ ಮಕ್ಕಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಂಡ್ರೊಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಕಬಡ್ಡಿ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ವೇಳೆ ಕ್ರೀಡಾಕೂಟದ ಆಯೋಜಕ ಗೇರುಪುರ ಇಂದಿರಾಗಾಂಧಿ ವಸತಿ ಶಾಲೆ ಪ್ರಾಂಶುಪಾಲ ಚಂದ್ರಶೇಖರ, ಮಂಡ್ರೊಳ್ಳಿ ಶಾಲೆ ಮುಖ್ಯ ಶಿಕ್ಷಕ ಟಿ.ಎಸ್.ಮಹಾಂತೇಶ, ಶಿಕ್ಷಕಿ ರೇಖಾ ಕುಮಾರಿ, ಆಸ್ಮಾ, ಶಿಕ್ಷಕ ಮುರಾರ್ಜಿ ಸಹಿತ ವಿಜೇತ ತಂಡದ ಸದಸ್ಯರು ಹಾಜರಿದ್ದರು.
ಸುಜಾತಾಗೆ ಹೊಸನಗರ ತಾಲ್ಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ
ಹೊಸನಗರ ; ಸುಮಾರು 31ವರ್ಷ ಕಾಲ ಹೊಸನಗರ ತಾಲ್ಲೂಕಿನ ವಿವಿಧ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದು ಈಗ ರಾಮಚಂದ್ರಪುರ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಸುಜಾತ ಮೋಹನ್ರವರನ್ನು ಹೊಸನಗರ ತಾಲ್ಲೂಕಿನ ಉತ್ತಮ ಶಿಕ್ಷಕಿಯೆಂದು ಘೋಷಿಸಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಿಂದ ಏರ್ಪಡಿಸಿದ ಡಾ. ಎಸ್ ರಾಧಾಕೃಷ್ಣನ್ರವರ 137ನೇ ಜನ್ಮ ದಿನಾಚರಣೆಯ ಪ್ರಯುಕ್ತ ಆರ್ಯ ಈಡಿಗರ ಸಬಾಭವನದ ಆವರಣದಲ್ಲಿ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ಅಭಿನಂದನೆ :
ಇವರ 31ವರ್ಷಗಳ ಕಾಲ ಸುದೀರ್ಘ ಸಾಧನೆಗೆ ಹಾಗು ತಾಲ್ಲೂಕು ಮಟ್ಟದ ಉತ್ತಮ ಶಿಕ್ಷಕಿಯಾಗಿ ಗುರುತಿಸಿರುವ ಶಿಕ್ಷಣ ಸಂಸ್ಥೆಯ ಎಲ್ಲ ಶಿಕ್ಷಕರಿಗೆ ಸಿಬ್ಬಂದಿಗಳಿಗೆ ಕೋಟೆಗಾರ್ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶಶಿಧರ್ನಾಯ್ಕ್, ಗೌರವಾಧ್ಯಕ್ಷ ಪಿ.ಆರ್ ಸಂಜೀವ, ಡಾ. ದಿನಮಣಿ, ಕಾರ್ಯದರ್ಶಿ ಹೆಚ್.ಆರ್ ಸುರೇಶ್, ಹೆಚ್ ಶ್ರೀನಿವಾಸ್, ಮಂಜುನಾಥ್, ಸಂಜೀವ ಸಂಘದ ಎಲ್ಲ ನಿರ್ದೇಶಕರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಬೈಸಗುಂದ ಶಾಲಾ ಶಿಕ್ಷಕ ಮಂಜಪ್ಪಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ
ಹೊಸನಗರ : ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರಾಗಿ ಸುಮಾರು 28 ವರ್ಷಗಳ ನಿರಂತರ ಸೇವೆ ಸಲ್ಲಿಸಿ, ಶಾಲೆಯ ಸರ್ವತೋಮುಖ ಬೆಳವಣಿಗೆಗೆ ಪ್ರಾಮಾಣಿಕ ನೀಡಿರುವ ತಾಲೂಕಿನ ಬೈಸಗುಂದ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಮಂಜಪ್ಪ ಬಿನ್ ದ್ಯಾವನಾಯ್ಕ ಇವರು 2025-26ನೇ ಸಾಲಿನ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಇವರ ಸಾಧನೆಯನ್ನು ಅಧ್ಯಕ್ಷರ ಸಹಿತ ಶಾಲಾಭಿವೃದ್ದಿ ಸಮಿತಿ ಸದಸ್ಯರು, ಶಾಲಾ ಶಿಕ್ಷಕ ವೃಂದ ಹಾಗು ಪೋಷಕ ವೃಂದ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.