Ripponpete

ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಿಕ್ಷಕರ ಜವಾಬ್ದಾರಿ ಮುಖ್ಯ ; ಬಿಇಒ ಕೃಷ್ಣಮೂರ್ತಿ

ರಿಪ್ಪನ್‌ಪೇಟೆ ; ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಿಕ್ಷಕರ ಜವಾಬ್ದಾರಿ ಮುಖ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ಹೇಳಿದರು.

WhatsApp Group Join Now
Telegram Group Join Now
Instagram Group Join Now

ಸ.ಹಿ.ಪ್ರಾ. ಶಾಲೆ ಮುತ್ತಲ ಇಲ್ಲಿ ನಡೆದ ಚಿಣ್ಣರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ತಾಯಿಯೇ ಮೊದಲ ಶಿಕ್ಷಕಿ, ಮನೆಯೇ ಮೊದಲ ಪಾಠಶಾಲೆ. ತಾಯಿ ಮನಸ್ಸು ಮಾಡಿದರೆ ಉತ್ತಮ ಮಕ್ಕಳನ್ನು ರೂಪಿಸಬಹುದು ಎಂದ ಅವರು, ಮಕ್ಕಳಲ್ಲಿ ಒಳ್ಳೆಯ ಭಾವನೆಗಳನ್ನು ನೀಡುವುದರ ಜತೆಗೆ ಮಕ್ಕಳಿಗೆ ಉತ್ತಮ ಉದಾಹರಣೆಗಳನ್ನು ನೀಡಿ. ಇದರಿಂದ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮುಖ್ಯ ಶಿಕ್ಷಕ ಪ್ರಶಾಂತ್ ಕುಮಾರ್, ವಿದ್ಯಾರ್ಥಿಗಳಲ್ಲಿ ಸಂಕುಚಿತ ಮನೋಭಾವನೆ ಹೋಗಲಾಡಿಸಲು ಶಾಲಾ ವಾರ್ಷಿಕೋತ್ಸವ ಉತ್ತಮವಾದ ವೇದಿಕೆಯಾಗಿದೆ. ಮಕ್ಕಳಲ್ಲಿ ಯಾವ ರೀತಿಯ ಪ್ರತಿಭೆಗಳು ಅಡಗಿರುತ್ತವೆ ಎಂಬುದು ಗೊತ್ತಿರುವುದಿಲ್ಲ. ಇಂತಹ ಕಾರ್ಯಕ್ರಮಗಳಲ್ಲಿ ಆ ಪ್ರತಿಭೆಗಳು ಬೆಳಕಿಗೆ ಬರುತ್ತವೆ ಎಂದರು.

ಕೋಡೂರು ಗ್ರಾ.ಪಂ. ಉಪಾಧ್ಯಕ್ಷ ಸುಧಾಕರ್ ಮಾತನಾಡಿ, ಕೆಲವು ಮಕ್ಕಳು ಕೇವಲ ಒಂದೇ ವಿಷಯಕ್ಕೆ ಸೀಮಿತವಾಗಿ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಾರೆ. ಓದು, ಬರಹದ ಜೊತೆಗೆ ಉತ್ತಮವಾದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಹವ್ಯಾಸವನ್ನು ಸಹ ರೂಢಿಸಿಕೊಳ್ಳುವುದು ಒಳ್ಳೆಯ ಬೆಳವಣಿಯಾಗಿದೆ ಎಂದರು.

ಸಿ.ಆರ್.ಪಿ. ಪ್ರದೀಪ್ ಮಾತನಾಡಿ, ಮುತ್ತಲ ಶಾಲೆಯು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡುತ್ತ ಬಂದಿದೆ ಎಂದರು.

ಕೋಡೂರು ಗ್ರಾ.ಪಂ. ಸದಸ್ಯ ಯೋಗೇಂದ್ರಪ್ಪ ಮಾತನಾಡಿ, ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು. ಸಾಧನೆ ಇಂದಿನ ಯುವ ಜನಾಂಗಕ್ಕೆ ಮಾದರಿಯಾಗಿ ಪ್ರೇರಣೆ ನೀಡಿಬೇಕು. ವಿದ್ಯೆ ಮನುಷ್ಯನನ್ನು ಬಾಳಿ ಬೆಳೆಸುತ್ತದೆ. ಎತ್ತರಕ್ಕೆ ಬೆಳೆದ ವ್ಯಕ್ತಿ ಸಮಾಜದ ಪ್ರಗತಿ, ದೇಶದ  ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಚಿಕ್ಕಜೇನಿ ಗ್ರಾ.ಪಂ ಸದಸ್ಯ ಭದ್ರಪ್ಪಗೌಡ ಮಾತನಾಡಿ, ಸೇವಾ ಮನೋಭಾದಿಂದ ಸಮಾಜ ಮತ್ತು ದೇಶ ಪ್ರಗತಿಗೆ ನೆರವಾಗಬೇಕು. ಎಲ್ಲ ದಾನಕ್ಕಿಂತ ವಿದ್ಯಾದಾನ ಶ್ರೇಷ್ಠವಾದುದು ಎಂದರು.

ಬಿ.ಆರ್.ಸಿ. ಮಂಜುಳಾ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಕಲಿಕೆಯ ಆಸಕ್ತಿಯನ್ನು ಕೇವಲ ಪಠ್ಯ ಪುಸ್ತಕ ವಿಷಯಗಳಿಗೆ ಸೀಮಿತಗೊಳಿಸದೆ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ಬೆಳೆಸಿಕೊಂಡು ಮುಂದಕ್ಕೆ ತಮ್ಮ ಆಸಕ್ತಿಯ ಕ್ಷೇತ್ರದಲ್ಲಿಯೇ ಮುಂದುವರಿಯಬೇಕು ಎಂಬ ಸಲಹೆಯನ್ನು ನೀಡಿದರು.

ಹಲವು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ತಾಲೂಕು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಗೌರವಿಸಲಾಯಿತು.

ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರಶೇಖರ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಚಿಕ್ಕಜೇನಿ ಗ್ರಾಪಂ ಸದಸ್ಯೆ ರಾಧಮ್ಮ, ಕೋಡೂರು ಗ್ರಾಪಂ ಸದಸ್ಯೆ ಅನ್ನಪೂರ್ಣ ಮಹೇಶ, ಕೋಡೂರು ಸೊಸೈಟಿ ನಿರ್ದೇಶಕರಾದ ಮಂಜಪ್ಪ, ಹರೀಶ, ರಾಜಶೇಖರ, ಶಿಕ್ಷಣ ಸಮನ್ವಯಾಧಿಕಾರಿ ರಂಗನಾಥ್, ಶಿಕ್ಷಣ ಸಂಯೋಜಕ ಕರಿಬಸಪ್ಪ, ತಾಲೂಕು ನೌಕರ ಸಂಘದ ಗೌರವಾಧ್ಯಕ್ಷ ಜಗದೀಶ್ ಕಾಗಿನೆಲೆ, ಪ್ರಾಥಮಿಕ ಶಾಲೆ ಶಿಕ್ಷಕರ ಸಂಘದ ತಾಲೂಕು ಉಪಾಧ್ಯಕ್ಷ ಶಿವಮೂರ್ತಿ, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ರಾಮಪ್ಪ, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ರಾಧ ಮತ್ತಿತರರು ಇದ್ದರು.

ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸಹ ಶಿಕ್ಷಕಿ ಮಲ್ಲಮ್ಮ ಸ್ವಾಗತಿಸಿದರು. ಅತಿಥಿ ಶಿಕ್ಷಕಿ ಕು||ಧಾಮಿಕಾ ವಾರ್ಷಿಕ ವರದಿ ವಾಚಿಸಿದರು. ಅತಿಥಿ ಶಿಕ್ಷಕ ರಮೇಶ್ ಎಸ್. ನಿರೂಪಿಸಿ, ವಂದಿಸಿದರು. ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]