ಶಿವಮೊಗ್ಗ ಸುದ್ದಿ

ಅಂಚೆ ಕಚೇರಿಗಳಲ್ಲಿ ತಾತ್ಕಾಲಿಕ ಸೇವಾ ಸ್ಥಗಿತ !

ಭಾರತೀಯ ಅಂಚೆ ಇಲಾಖೆಯ ನಿರ್ದೇಶನದಂತೆ, ಹೊಸ ತಂತ್ರಾಂಶವಾದ APT 2.0 ಅನ್ನು ಅಳವಡಿಸಲು ಶಿವಮೊಗ್ಗ ಹಾಗೂ ಉಪ ಅಂಚೆ ಕಚೇರಿಗಳಲ್ಲಿ ತಾತ್ಕಾಲಿಕವಾಗಿ ವ್ಯವಹಾರ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗುತ್ತಿದೆ.

WhatsApp Group Join Now
Telegram Group Join Now
Instagram Group Join Now

Read More:ಯಾರೂ ತಿಳಿಯದ ಸರ್ಕಾರದ ಸ್ಕೀಮ್ – ಮೊಬೈಲ್ ಕ್ಯಾಂಟೀನ್‌ಗೆ ಲಕ್ಷಾಂತರ ಸಹಾಯ !

ಜೂನ್ 23 ರಂದು ಶಿವಮೊಗ್ಗ ಪ್ರಧಾನ ಅಂಚೆ ಕಚೇರಿಯಲ್ಲಿ, ಜೂನ್ 26 ರಂದು ಭದ್ರಾವತಿ ಹಾಗೂ ಸಾಗರ ಪ್ರಧಾನ ಅಂಚೆ ಕಚೇರಿಗಳೊಂದಿಗೆ ಅದರ ವ್ಯಾಪ್ತಿಯ ಎಲ್ಲಾ ಶಾಖಾ ಅಂಚೆ ಕಚೇರಿಗಳಲ್ಲಿ APT 2.0 ಅಳವಡಿಕೆ ನಡೆಯಲಿದೆ.

ಈ ತಂತ್ರಾಂಶವನ್ನು ಯಶಸ್ವಿಯಾಗಿ ಅಳವಡಿಸಲು, ಜೂನ್ 21 ರಂದು ಶಿವಮೊಗ್ಗ ಮತ್ತು ತೀರ್ಥಹಳ್ಳಿ ತಾಲೂಕುಗಳ ಅಂಚೆ ಕಚೇರಿಗಳು ಮತ್ತು ಜೂನ್ 25 ರಂದು ಭದ್ರಾವತಿ, ಸಾಗರ, ಸೊರಬ, ಹೊಸನಗರ ಹಾಗೂ ಶಿಕಾರಿಪುರ ತಾಲೂಕುಗಳ ಅಂಚೆ ಕಚೇರಿಗಳಲ್ಲಿ ಎಲ್ಲಾ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಅಂಚೆ ಸೇವೆಗಳಲ್ಲಿ ತಾತ್ಕಾಲಿಕ ವ್ಯತ್ಯಯವಾಗುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕರಿಸಬೇಕೆಂದು ಅಂಚೆ ಅಧೀಕ್ಷಕ ಜಯರಾಮ ಶೆಟ್ಟಿ ಜಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More :ಕಾಡಾನೆ ದಾಳಿ: ಭದ್ರಾವತಿಯಲ್ಲಿ ವ್ಯಕ್ತಿ ದುರ್ಮರಣ !

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650