ಅಪರಾಧ ಸುದ್ದಿ

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ; ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗ ಮೂಲದ ವ್ಯಕ್ತಿ ಸಾವು !

ಶಿವಮೊಗ್ಗ ; ಜಮ್ಮು-ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ವ್ಯಕ್ತಿ ಸಾವನ್ನಪ್ಪಿದ್ದಾರೆ.

WhatsApp Group Join Now
Telegram Group Join Now
Instagram Group Join Now

ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತ ದುರ್ಧೈವಿ. ಶಿವಮೊಗ್ಗ ವಿಜಯನಗರ ನಿವಾಸಿಯಾಗಿರುವ ಮಂಜುನಾಥ್ ಅವರು ಪತ್ನಿ ಪಲ್ಲವಿ ಹಾಗೂ ಪುತ್ರ ಅಭಿಜೇಯ ಜೊತೆ ಪ್ರವಾಸಕ್ಕೆ ಹೋಗಿದ್ದರು. ಮಂಜುನಾಥ್ ಕುಟುಂಬಸ್ಥರು ಏ.19 ರಂದು ಶಿವಮೊಗ್ಗದಿಂದ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸದ ವೇಳೆ ಕಾಶ್ಮೀರದ ಪೆಹಲ್ಗಾವ್ ಬಳಿ ಉಗ್ರ ದಾಳಿ ನಡೆದಿದೆ. ದಾಳಿಯಲ್ಲಿ ಮಂಜುನಾಥ್ ರಾವ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಜುನಾಥ್ ಪತ್ನಿ ಹಾಗೂ ಪುತ್ರರನ್ನು ರಕ್ಷಿಸಿರುವ ಸ್ಥಳೀಯರು ಬೇರೆಡೆ ಕರೆದೊಯ್ದಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಮೋದಿಗೆ ಹೇಳು ಎಂದ ಉಗ್ರ !

ಪ್ರವಾಸಕ್ಕೆ ತೆರಳಿದ್ದ ಮಂಜುನಾಥ್‌ ಕುಟುಂಬದ ಬಳಿ ಬಂದ ಉಗ್ರನೊಬ್ಬ ಮಂಜುನಾಥ್‌ ಅವರನ್ನು ಗುಂಡಿಕ್ಕಿ ಕೊಂದಿದ್ದಾನೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಮಂಜುನಾಥ್‌ ಪತ್ನಿ ಪಲ್ಲವಿ ಅವರು, “ನೀನು ನನ್ನನ್ನು ಮತ್ತು ಮಗನನ್ನು ಕೊಲ್ಲು ಎಂದು ಹೇಳಿದೆ. ಆದರೆ ಆ ಉಗ್ರ, ʼನಾನು ನಿನ್ನನ್ನು ಕೊಲ್ಲಲ್ಲ. ನೀನು ಹೋಗಿ ಮೋದಿಗೆ ಹೇಳುʼ ಎಂದ” ಎಂದು ಹೇಳಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!