ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದ ಬರೋಬ್ಬರಿ 23 ಕೋಟಿ ಬೆಲೆಯ 40 ಕೆ.ಜಿ. ಚಿನ್ನಾಭರಣ ವಶ

0 46

ತರೀಕೆರೆ : ತಾಲೂಕಿನ ಎಂ.ಸಿ ಹಳ್ಳಿ ಪೊಲೀಸ್‌ ಚೆಕ್‌ ಪೋಸ್ಟ್‌ನಲ್ಲಿ ಬರೋಬ್ಬರಿ 40 ಕೆ.ಜಿ. ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ ಸುಮಾರು 23 ಕೋಟಿ ರೂ.ಎಂದು ಅಂದಾಜಿಸಲಾಗಿದೆ.


ಚೆಕ್‌ಪೋಸ್ಟ್‌ ನಲ್ಲಿ ಕಂಟೇನರ್‌ ತಡೆದು ತಪಾಸಣೆ ನಡೆಸಿದಾಗ ಈ ಪ್ರಮಾಣದ ಚಿನ್ನ ಪತ್ತೆಯಾಗಿದ್ದು ಇದಕ್ಕೆ ಸಂಬಂಧಿಸಿ ಸೂಕ್ತ ದಾಖಲೆ ಇಲ್ಲದೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಸಾಗಿಸುತ್ತಿದ್ದ ಚಿನ್ನಾಭರಣ ಇದೆಂದು ತಿಳಿದುಬಂದಿದೆ.

ಪದೇಪದೆ ಇದೇ ಚೆಕ್‌ಪೋಸ್ಟ್‌ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಸರ್ಕಾರಕ್ಕೆ ತೆರಿಗೆ ವಂಚನೆ ಮಾಡುತ್ತಿರುವ ಚಿನ್ನಾಭರಣ ವ್ಯಾಪಾರಿಗಳು ಈ ಸಾಗಾಟ ಮಾಡುತ್ತಿದ್ದಾರೆ ಎನ್ನಲಾಗಿದೆ.

ತೆರಿಗೆ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದೆ.

Leave A Reply

Your email address will not be published.

error: Content is protected !!