ಮರಕ್ಕೆ ಕಾರು ಡಿಕ್ಕಿ ; ದಂಪತಿಗಳಿಬ್ಬರು ಸಾವು, ಮಕ್ಕಳ ಸ್ಥಿತಿ ಗಂಭೀರ !

0 0

ತರೀಕೆರೆ: ತುಮಕೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಕಾರು ಡಿಕ್ಕಿ ಹೊಡೆದು ದಂಪತಿಗಳಿಬ್ಬರು ಸಾವನ್ನಪ್ಪಿದ್ದಾರೆ.
ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಶಿವಮೊಗ್ಗ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.


ತಾಲ್ಲೂಕಿನ ಬೆಟ್ಟದತಾವರೆ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಮೃತ ದಂಪತಿಗಳನ್ನು ಶ್ರೀನಿವಾಸ್ ಹಾಗೂ ಶ್ವೇತಾ ಎಂದು ಗುರುತಿಸಲಾಗಿದೆ.


ಕುಟುಂಬಸ್ಥರ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ
ಬೆಂಗಳೂರಿನಿಂದ ಭದ್ರಾವತಿಗೆ ತೆರಳುತ್ತಿದ್ದ ವೇಳೆ ಅವಘಡ ನಡೆದಿದ್ದು, ತರೀಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave A Reply

Your email address will not be published.

error: Content is protected !!