ಹೊಸನಗರ

ಭಕ್ತಿ-ಸಂಭ್ರಮದಿಂದ ಜರುಗಿದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ 3ನೇ ಜಾತ್ರಾ ಮಹೋತ್ಸವ

ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಾಲಯದಲ್ಲಿ ದೇವಿಯ ಮೂರನೇ ವರ್ಷದ ಜಾತ್ರಾ ಮಹೋತ್ಸವವು ಅತ್ಯಂತ ಭಕ್ತಿ ಹಾಗೂ ಸಡಗರ ಸಂಭ್ರಮಗಳಿಂದ ಯಶಸ್ವಿಯಾಗಿ ಜರುಗಿತು.

ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ 3ನೇ ಜಾತ್ರಾ ಮಹೋತ್ಸವ Ammanaghatta

ಹೊಸನಗರ : ತಾಲೂಕಿನ ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಾಲಯದಲ್ಲಿ ದೇವಿಯ ಮೂರನೇ ವರ್ಷದ ಜಾತ್ರಾ ಮಹೋತ್ಸವವು ಅತ್ಯಂತ ಭಕ್ತಿ ಹಾಗೂ ಸಡಗರ ಸಂಭ್ರಮಗಳಿಂದ ಯಶಸ್ವಿಯಾಗಿ ಜರುಗಿತು.

WhatsApp Group Join Now
Telegram Group Join Now
Instagram Group Join Now

ಜಾತ್ರೆಯ ಪ್ರಯುಕ್ತ ದೇವಾಲಯದ ಆವರಣವನ್ನು ತಳಿರು-ತೋರಣಗಳು ಹಾಗೂ ವರ್ಣರಂಜಿತ ಹೂವುಗಳಿಂದ ಕಣ್ಮನ ಸೆಳೆಯುವಂತೆ ಶೃಂಗರಿಸಲಾಗಿತ್ತು. ದೇವಾಲಯದ ಪ್ರಧಾನ ಅರ್ಚಕರಾದ ಭಾಸ್ಕರ್ ಜೋಯ್ಸ್ ಅವರ ನೇತೃತ್ವದಲ್ಲಿ ದೇವಿಗೆ ಬೆಳಗಿನಿಂದಲೇ ವಿವಿಧ ಧಾರ್ಮಿಕ ಕೈಂಕರ್ಯಗಳು ಹಾಗೂ ವಿಶೇಷ ಪೂಜೆಗಳು ಶಾಸ್ತ್ರೋಕ್ತವಾಗಿ ನೆರವೇರಿದವು. ಈ ಶುಭ ಸಂದರ್ಭದಲ್ಲಿ ನೂರಾರು ಮುತ್ತೈದೆಯರು ದೇವಿಗೆ ಹಣ್ಣು-ಕಾಯಿ ಸಮರ್ಪಿಸಿ, ವಿಶೇಷವಾಗಿ ಉಡಿ ಸೇವೆ ಸಲ್ಲಿಸುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು.

ಹರಿದುಬಂದ ಜನಸಾಗರ:

ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೆ, ಹೊರ ಜಿಲ್ಲೆಗಳಿಂದಲೂ ತಂಡೋಪತಂಡವಾಗಿ ಆಗಮಿಸಿದ ಸಾವಿರಾರು ಭಕ್ತರು ಬೆಳಗಿನಿಂದಲೇ ಉದ್ದನೆಯ ಸರದಿಸಾಲಿನಲ್ಲಿ ನಿಂತು ಜೇನುಕಲ್ಲಮ್ಮ ದೇವಿಯ ದರ್ಶನ ಪಡೆದು ಪುನೀತರಾದರು. ಭಕ್ತರ ಅಪಾರ ಹಾಜರಾತಿಯಿಂದಾಗಿ ದೇವಾಲಯದ ಆವರಣದಲ್ಲಿ ಜನಸಾಗರವೇ ಹರಿದುಬಂದಂತಿತ್ತು.

ಗಣ್ಯರ ಭೇಟಿ:

ಶ್ರೀ ಕ್ಷೇತ್ರಕ್ಕೆ ಯೋಗೇಂದ್ರ ಅವಧೂತ ಗುರೂಜಿ ಹಾಗೂ ಸಿಗಂದೂರು ಕ್ಷೇತ್ರದ ಧರ್ಮದರ್ಶಿ ರಾಮಪ್ಪ ಭೇಟಿ ನೀಡಿ, ದೇವಿಯ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಜಾತ್ರಾ ಮಹೋತ್ಸವದ ಸುಗಮ ನಿರ್ವಹಣೆಗೆ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕಲಗೋಡು ರತ್ನಾಕರ, ಪ್ರಮುಖರಾದ ರಾಜು ಜೇನಿ, ಭದ್ರಪ್ಪಗೌಡ, ಸುಬ್ಬಣ್ಣ, ರಂಜಿತ್ ಹಾಗೂ ಸಮಿತಿಯ ಎಲ್ಲಾ ಸದಸ್ಯರು ಸಾಥ್ ನೀಡಿದರು. ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಚ್ಚುಕಟ್ಟಾದ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!