Ripponpete

ಸಮಟಗಾರು : ಹೊಸದಾಗಿ ದಾಖಲಾದ ಮಕ್ಕಳಿಗೆ ಆರತಿ ಎತ್ತಿ ತಿಲಕವಿಟ್ಟು ಪುಷ್ಪನೀಡಿ ಸ್ವಾಗತ

ರಿಪ್ಪನ್‌ಪೇಟೆ : ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲೆಗಳು ಸೋಮವಾರದಿಂದ ಆರಂಭವಾಗಿದ್ದು ಹುಂಚ ಗ್ರಾ.ಪಂ. ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮಟಗಾರು ಇಲ್ಲಿ ಶಾಲಾ ಪ್ರಾರಂಭೋತ್ಸವದಲ್ಲಿ ಮಕ್ಕಳನ್ನು ಅತ್ಯಂತ ಸಡಗರ ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು.

WhatsApp Group Join Now
Telegram Group Join Now
Instagram Group Join Now

ದಾಖಲಾತಿ ಘೋಷ ವಾಕ್ಯಗಳು ಹಾಗೂ ಬಣ್ಣ ಬಣ್ಣದ ಪದ ಚಕ್ರಗಳೊಂದಿಗೆ ಪುಟಾಣಿಗಳು ಕಂಗೊಳಿಸುತ್ತಿದ್ದರು. ವಾಹನಗಳೊಂದಿಗೆ, ಪೋಷಕರು ಹಾಗೂ ವಿದ್ಯಾರ್ಥಿಗಳು ಊರಿನ ಪ್ರಮುಖ ಬೀದಿಗಳಲ್ಲಿ ಜಾಥಾ ನಡೆಸಿ ಶಿಕ್ಷಣದ ಮಹತ್ವವನ್ನು ಸಾರಿದರು.

ಹೊಸದಾಗಿ ದಾಖಲಾದ ಮಕ್ಕಳಿಗೆ ಆರತಿ ಎತ್ತಿ ತಿಲಕವಿಟ್ಟು, ರೇನ್ ಕೋಟ್, ಕಲಿಕಾ ಸಾಮಗ್ರಿ, ಸಿಹಿ ವಿತರಿಸಿ ಶಾಲೆಗೆ ಬರಮಾಡಿಕೊಳ್ಳಲಾಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ನಾಗಭೂಷಣರಾಯ್ ನೂತನವಾಗಿ ಪ್ರಾರಂಭವಾಗುತ್ತಿರುವ ಎಲ್.ಕೆ.ಜಿ ಮಬ ಯು.ಕೆ.ಜಿಗೆ ₹25,000 ಗಳನ್ನು ನೀಡಿ ಶುಭ ಹಾರೈಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಒಂದು ಮತ್ತು 6ನೇ ತರಗತಿಗೆ ಇಂಗ್ಲಿಷ್ ಮಾಧ್ಯಮ ಹಾಗೂ ದ್ವಿಭಾಷಾ ಮಾಧ್ಯಮ ಪ್ರಾರಂಭವಾಗುವ ಕುರಿತು ಪೋಷಕರು ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶ್ರೀಧರ ಮೂರ್ತಿ ಕಡಸೂರು, ಎಸ್‌ಡಿಎಂಸಿ ಅಧ್ಯಕ್ಷ ಮೋಹನ ಎಂ ಎಸ್, ಉಪಾಧ್ಯಕ್ಷೆ ಭಾರತಿ, ಮುಖ್ಯ ಶಿಕ್ಷಕಿ ರತ್ನಕುಮಾರಿ ಹಾಗೂ ಶಿಕ್ಷಕವೃಂದ, ಪೋಷಕರು, ಗ್ರಾಮಸ್ಥರು ಇದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]