MUDIGERE ; ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸುಮಾರು 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಂಕಸಾಲೆ ಬಳಿ ಶನಿವಾರ ಬೆಳಗಿನಜಾವ ನಡೆದಿದೆ.

ಬೆಂಗಳೂರಿನಿಂದ ಹೊರನಾಡಿಗೆ ಕಾರಿನಲ್ಲಿ ಹೋಗುತ್ತಿದ್ದ ಪ್ರವಾಸಿಗರು ಮೂಡಿಗೆರೆ ತಾಲೂಕಿನ ಸುಂಕಸಾಲೆ ಬಳಿ ತಿರುವಿನಲ್ಲಿ ದಟ್ಟ ಮಂಜಿನಿಂದ ರಸ್ತೆ ಕಾಣದೆ ನಿಯಂತ್ರಣ ಕಳೆದುಕೊಂಡು 30 ಅಡಿ ಆಳದಲ್ಲಿದ್ದ ಪಂಚಾಯತ್ ಅಂಗಳಕ್ಕೆ ಬಿದ್ದಿದೆ.

ಘಟನೆಯಲ್ಲಿ ಗಾಯಗೊಂಡವರನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನಲಾಗಿದ್ದು. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ.
ಈ ಘಟನೆ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.