Ripponpete

ಅರಸಾಳು ವಲಯ ಅರಣ್ಯ ವ್ಯಾಪ್ತಿಯಲ್ಲಿ 60 ಸಾವಿರ ಗಿಡಗಳ ಬೆಳೆಸುವ ಗುರಿ : RFO ಶರಣಪ್ಪ

ರಿಪ್ಪನ್‌ಪೇಟೆ : ಅರಸಾಳು ವಲಯ ವ್ಯಾಪ್ತಿಯಲ್ಲಿ ಬರುವ ಅರಣ್ಯ ಪ್ರದೇಶದಲ್ಲಿ 60 ಸಾವಿರ ವಿವಿಧ ಜಾತಿಯ ಗಿಡಗಳನ್ನು ಬೆಳೆಸಲಾಗುವುದೆಂದು ಅರಸಾಳು ವಲಯ ಅರಣ್ಯಾಧಿಕಾರಿ ಶರಣಪ್ಪ ಕೆ.ಬಿ.ತಿಳಿಸಿದರು.

WhatsApp Group Join Now
Telegram Group Join Now
Instagram Group Join Now

ವಲಯ ಅರಣ್ಯಾಧಿಕಾರಿ ಕಛೇರಿಯಲ್ಲಿ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಸಿರು ನಮ್ಮ ಉಸಿರು, ಅದನ್ನು ಕಾಪಾಡಬೇಕಾದ ಹೊಣೆ ನಮ್ಮೆಲ್ಲರದ್ದು. ಮನೆಯ ಸುತ್ತಮುತ್ತ ಮರ-ಗಿಡಗಳನ್ನು ಬೆಳೆಸುವುದರೊಂದಿಗೆ ಪರಿಶುದ್ಧ ಗಾಳಿಯನ್ನು ಪಡೆಯಲು ಹಾಗು ಸ್ವಚ್ಚತೆಯಿಂದ ಪರಿಸರ ರಕ್ಷಣೆ ಮಾಡುವುದರೊಂದಿಗೆ ನಮ್ಮ ಮುಂದಿನ ಪೀಳಿಗೆಗೆ ಶುದ್ದ ಆಮ್ಲಜನಕಯುಕ್ತ ಗಾಳಿ ಪಡೆಯಲು ಸಾಧ್ಯವಾಗುವುದೆಂದರು.

ನಮ್ಮ ವಲಯ ವ್ಯಾಪ್ತಿಯಲ್ಲಿ ಅರಣ್ಯ ಒತ್ತುವರಿ ಇಲ್ಲ. ಅಲ್ಲದೆ ಕಾಡಿನ ಸುತ್ತ ಮುಳ್ಳಿನ ತಂತಿಯ ತಡೆ ಬೇಲಿ ಹಾಗೂ ಟ್ರಂಚ್ ಹೊಡೆಯಲಾಗಿದ್ದು ಯಾರು ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡದಂತಾಗಿದೆ. ಇನ್ನೂ ಮಳೆಗಾಲ ಪ್ರಾರಂಭವಾಗುವ ಹಂತದಲ್ಲಿದ್ದು ಬೆಂಕಿಯಿಂದ ಅರಣ್ಯ ನಾಶ ಸಹ ಇಲ್ಲದಂತಾಗಿದೆ ಎಂದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ಸಂದರ್ಭದಲ್ಲಿ ಉಪವಲಯ ಅರಣ್ಯಾಧಿಕಾರಿ ಸುನೀಲ್ ಹಾಗೂ ಕಛೇರಿ ಸಿಬ್ಬಂದಿವರ್ಗ ಹಾಜರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!