SAGARA | ಚಲಿಸುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಜೋಗ ರಸ್ತೆಯ ಕೆ.ಎಸ್.ಆರ್.ಟಿ.ಸಿ ಡಿಪೋ ಬಳಿ ನಡೆದಿದೆ.

ಭಟ್ಕಳದಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ಇದಾಗಿದ್ದು ಅದೃಷ್ಟವಶಾತ್ ಭಾರೀ ಅನಾವುತವೊಂದು ತಪ್ಪಿದೆ.
ಕೆಲವೇ ಕ್ಷಣದಲ್ಲಿ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಹೊತ್ತಿ ಉರಿದಿದ್ದು ಅದೃಷ್ಟವಶಾತ್ ಬಸ್‌ನಲ್ಲಿದ್ದ 12 ಜನ ಪ್ರಯಾಣಿಕರು ಪಾರಾಗಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.