Ripponpete

ಉರ್ದು ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ; ಬಿಇಒ ಕೃಷ್ಣಮೂರ್ತಿ

ರಿಪ್ಪನ್‌ಪೇಟೆ ; ಮುಸ್ಲಿಂ ಮಕ್ಕಳು ತಮ್ಮ ಭಾಷೆಯಾದ ಉರ್ದು ಭಾಷೆಯ ಕಲಿಕೆಯೊಂದಿಗೆ ಇತ್ತೀಚಿನ ವರ್ಷಗಳಲ್ಲಿ ಇಂಗ್ಲಿಷ್ ಭೋದನೆಯನ್ನು ಸರ್ಕಾರಿ ಶಾಲೆಗಳಲ್ಲಿ ಆರಂಭಿಸಲಾಗಿದ್ದು ಈ ಸೌಲಭ್ಯದ ಸದ್ಬಳಕೆ ಮಾಡಿಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ ಕರೆ ನೀಡಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇಲ್ಲಿನ ಬರುವೆ ಗ್ರಾಮದಲ್ಲಿನ ಚೌಡೇಶ್ವರಿ ಬೀದಿಯಲ್ಲಿರುವ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಏರ್ಪಡಿಸಲಾಗಿದ್ದ ಚಿಣ್ಣರ ಚಿಲಿಪಿಲಿ ಸಂಭ್ರಮ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸರ್ಕಾರ ಸಾಕಷ್ಟು ಯೋಜನೆಗಳನ್ನು ಅನುಷ್ಟಾನಗೊಳಿಸಿದ್ದು ಅಲ್ಪಸಂಖ್ಯಾತರ ಮಕ್ಕಳಿಗೆ ವಿಶೇಷವಾಗಿ ಶಿಕ್ಷಣಕ್ಕಾಗಿ ಹೆಚ್ಚು ಒತ್ತು ನೀಡಿದ್ದು ತಮ್ಮ ಮಾತೃ ಭಾಷೆಯೊಂದಿಗೆ ಬದುಕಿಗಾಗಿ ಇಂಗ್ಲಿಷ್ ಭಾಷೆಯನ್ನು ಕಲಿಯಲು ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿ, ಈಗಾಗಲೇ ಇಲ್ಲಿನ ಶಾಲಾ ಶಿಕ್ಷಕಿಯರು ಶ್ರಮವಹಿಸಿ ಆಂಗ್ಲಭಾಷೆಯಲ್ಲಿ ಮಕ್ಕಳನ್ನು ತಯಾರಿಗೊಳಿಸಿರುವುದನ್ನು ನೋಡಿ ಶಿಕ್ಷಕರ ಸೇವೆಯನ್ನು ಅಭಿನಂದಿಸಿದರು.

ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಪಿ.ಕೆ.ಮೊಹಮ್ಮದ್ ಅಲಿ ಅಧ್ಯಕ್ಷತೆ ವಹಿಸಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಮುಖ್ಯ ಆತಿಥಿಗಳಾಗಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷ್ಮಿ, ಗ್ರಾಮ ಪಂಚಾಯಿತ್ ಸದಸ್ಯೆ ವಿನೋದ ಹಿರಿಯಣ್ಣ, ರಾಜ್ಯ ಸರ್ಕಾರಿ ನೌಕರ ಸಂಘದ ತಾಲ್ಲೂಕು ಘಟಕದ ಗೌರವಾಧ್ಯಕ್ಷ ಜಗದೀಶ, ಶಿಕ್ಷಣ ಸಂಯೋಜಕರಾದ ಕರಿಬಸಪ್ಪ, ಮೂರ್ತಿನಾಯ್ಕ್, ಸಂಪನ್ಮೂಲ ವ್ಯಕ್ತಿ ಮಮಜುನಾಥ, ಜುಮ್ಮಾಮಸೀದಿಯ ಅಧ್ಯಕ್ಷ ಹಸನಬ, ಮೆಕ್ಕಾ ಮಸೀದಿಯ ಅಧ್ಯಕ್ಷ ಜಾಕೀರ್ ಹುಸೇನ್, ಸಾಮಾಜಿಕ ಹೋರಾಟಗಾರ ಟಿ.ಆರ್.ಕೃಷ್ಣಪ್ಪ, ಕೋಟೆತಾರಿಗ ಶಾಲೆಯ ಶಿಕ್ಷಕ ಶಿಕ್ಷಕರ ಸಂಘದ ಗೌರವಾಧ್ಯಕ್ಷ ದಾನೇಶಪ್ಪ, ಜಿಲ್ಲಾ ಉರ್ದು ಶಿಕ್ಷಕರ ಸಂಘದ ನಿರ್ದೇಶಕ ಸೈಯದ್ ಅಬ್ದುಲ್‌ನಾಸಿರ್, ಎಸ್.ಎಸ್.ಎಫ್,ಸಂಘದ ಅಧ್ಯಕ್ಷ ಅಜ್ಮಲ್, ಇನ್ನಿತರು ಹಾಜರಿದ್ದು ಮಾತನಾಡಿದರು.

ಮುಖ್ಯ ಶಿಕ್ಷಕಿ ನೀಲಾವತಿ ಸ್ವಾಗತಿಸಿದರು. ಸಹಶಿಕ್ಷಕಿ ಸಾಜಿದಬೇಗಂ ವಂದಿಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>