ಹೊಸನಗರ

ಗುಣಮಟ್ಟದ ಕಲಿಕೆಗಾಗಿ ಸರ್ಕಾರ ಹತ್ತು ಹಲವು ಶೈಕ್ಷಣಿಕ ಸೌಲಭ್ಯಗಳನ್ನು ನೀಡುತ್ತಿದೆ ; ಶೇಷಾಚಲ ನಾಯಕ್

ಹೊಸನಗರ ; ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಗುಣಮಟ್ಟದ ಕಲಿಕೆಗಾಗಿ ಸರ್ಕಾರ ಹತ್ತು ಹಲವು ಶೈಕ್ಷಣಿಕ ಸೌಲಭ್ಯಗಳನ್ನು ಪ್ರೋತ್ಸಾಹಕಗಳನ್ನು ನೀಡುತ್ತಿದೆ ಎಂದು ಅಕ್ಷರ ದಾಸೋಹದ ತಾಲ್ಲೂಕು ಸಮನ್ವಯಾಧಿಕಾರಿ ಶೇಷಾಚಲ ನಾಯಕ್‌ ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಪ್ರೌಢಶಾಲಾ ವಿಭಾಗದಲ್ಲಿ ಆಯೋಜಿಸಿದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರಗಳು ಗುಣಮಟ್ಟದ ಅರ್ಹತೆ ಹೊಂದಿದ ಶಿಕ್ಷಕರು, ಉಚಿತ ಪಠ್ಯ ಪುಸ್ತಕ, ಸಮವಸ್ತ್ರ, ಗ್ರಂಥಾಲಯ, ಬಿಸಿಯೂಟ, ಕ್ಷೀರಭಾಗ್ಯ ಯೋಜನೆ, ಮೊಟ್ಟೆ, ಬಾಳೆಹಣ್ಣು ವಿತರಣೆ ಇತ್ಯಾದಿ ಕೊಡುಗೆಗಳು ನೀಡುತ್ತಿದ್ದರೂ ಖಾಸಗಿ ಶಾಲೆಗಳ ವ್ಯಾಮೋಹಕ್ಕೆ ಪೋಷಕರು ಬಲಿಯಾಗುತ್ತಿದ್ದಾರೆ. ಸರ್ಕಾರದ ಜೊತೆಗೆ ವಿದ್ಯಾರ್ಥಿಗಳ ಪೋಷಕರು ಹಾಗೂ ಸಮುದಾಯದ ಸಹಕಾರಗಳ ಸಿಕ್ಕರೆ ಮಕ್ಕಳ ಸರ್ವತೋಮುಖ ಅಭಿವೃದ್ಧಿ ಸಾಧ್ಯ. ಇಂದಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ಬಗ್ಗೆ ಹೆಮ್ಮೆಯಾಗುತ್ತಿದ್ದು ಸರ್ಕಾರಿ ಶಾಲೆಯೆಂದರೆ ಬಡವರ ಶಾಲೆ ಎಂಬ ತಪ್ಪು ಕಲ್ಪನೆ ಬಿಟ್ಟು ಎಲ್ಲರೂ ಸರ್ಕಾರ ಶಾಲೆಯತ್ತಾ ಚಿತ್ತ ಹರಿಸಬೇಕೆಂದರು.

ಈ ಕಾರ್ಯಕ್ರಮವನ್ನು ಕ್ಷೇತ್ರ ಸಮನ್ವಯಾಧಿಕಾರಿ ರಂಗನಾಥ್ ಉದ್ಘಾಟಿಸಿ ಮಾತನಾಡಿ ಸರ್ಕಾರಿ ಶಾಲೆಯ ಶಿಕ್ಷಣದ ಬಗ್ಗೆ ಅರಿವು ಮೂಡಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಅಶ್ವಿನಿಕುಮಾರ್ ವಹಿಸಿ ಮಾತನಾಡಿ, ಸರ್ಕಾರದ ಯೋಜನೆಗಳ ಜೊತೆಗೆ ನಮ್ಮ ಶಾಲಾಭಿವೃದ್ಧಿ ಸಮಿತಿ ಸಂಪೂರ್ಣ ಜವಾಬ್ದಾರಿ ಅರಿತು ನಮ್ಮ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಪರಿಣಾಮವಾಗಿ ಗುಣಾತ್ಮಕ ಫಲಿತಾಂಶ ನಮಗೆ ಸಿಗುತ್ತಿದೆ ಸರ್ಕಾರಿ ಶಾಲೆಗಳನ್ನು ಉಳಿಸಲು ಬೆಳೆಸಲು ಹೊರಟಿರುವ ಸರ್ಕಾರಿ ಶಿಕ್ಷಕರು ಮತ್ತು ಇನ್ನಿತರ ಅಧಿಕಾರಿಗಳು ತಮ್ಮ ಮಕ್ಕಳನ್ನು ಮೊದಲು ಸರ್ಕಾರಿ ಶಾಲೆಗೆ ಸೇರಿಸಿ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕರಾದ ವಿನಯ್ ಹೆಗಡೆ, ಪ್ರೌಡ ಶಾಲಾ ಮುಖ್ಯ ಶಿಕ್ಷಕರಾದ ರೇಣುಕೇಶ್, ಶಿಕ್ಷಕಿ ಅಂಜಲಿ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ರಮ್ಯಾ, ಶಾಹಿನ ನಾಸಿರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯೆ ಲಿಲ್ಲಿ ಡಿಸೋಜ, ತಾಲ್ಲೂಕಿನ ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರು ಪೋಷಕರು, ವಿದ್ಯಾರ್ಥಿಗಳು ಅಡುಗೆಯ ಸಿಬ್ಬಂದಿಗಳು ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>