ರಿಪ್ಪನ್‌ಪೇಟೆ ; ಕಳೆದ ಐದಾರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಕೋಡು-ಗವಟೂರು ಸಂಪರ್ಕ ರಸ್ತೆ ಸಂಪೂರ್ಣ ಕೆಸರು ಗದ್ದೆಯಂತಾಗಿ ಸಾರ್ವಜನಿಕರು, ಶಾಲಾ-ಕಾಲೇಜ್ ವಿದ್ಯಾರ್ಥಿಗಳು ಓಡಾಡದಂತಾಗಿದ್ದು ಸಾಕಷ್ಟು ಬಾರಿ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಪ್ರಯೋಜವಾಗದ ಕಾರಣ ಗ್ರಾಮಸ್ಥರೇ ದುರಸ್ತಿಯಲ್ಲಿ ತೊಡಗುವಂತಾಗಿದೆ.
ನಿತ್ಯ ಸುಮಾರು ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಓಡಾಡುವ ಮುಖ್ಯ ಸಂಪರ್ಕ ರಸ್ತೆಯಾಗಿದ್ದು ಅನಾರೋಗ್ಯ ಪೀಡಿತರು ಮತ್ತು ಗರ್ಭೀಣಿಯರು ಮತ್ತು ಶಾಲಾ-ಕಾಲೇಜ್ ವಿದ್ಯಾರ್ಥಿಗಳು ರಿಪ್ಪನ್‌ಪೇಟೆಗೆ ಬಂದು ಹೋಗುವ ಪ್ರಮುಖ ರಸ್ತೆ ಇದಾಗಿದ್ದು ಸಂಪೂರ್ಣ ಕೆಸರು ಗದ್ದೆಯಂತಾಗಿ ಯಾವುದೇ ವಾಹನಗಳು ಸಂಚರಿಸದ ಸ್ಥಿತಿ ನಿರ್ಮಾಣವಾಗಿದೆ.
ಗೋಲ್ಡನ್ ಸಿಟಿ ಲೇಔಟ್ ಅವೈಜ್ಞಾನಿಕ ನಿರ್ಮಾಣದಲ್ಲಿ ನಿರ್ಮಿಸಲಾಗಿರುವ ರಸ್ತೆ ಮತ್ತು ಬಾಕ್ಸ್ ಚರಂಡಿ ಮೂಲಕ ನೀರು ಹರಿದು ಈ ರಸ್ತೆಗೆ ನುಗ್ಗುವ ಪರಿಣಾಮದಿಂದಾಗಿ ಈ ರೀತಿ ಹಾಳಾಗಲು ಕಾರಣವೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ಈ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಬಂದರೆ ಯಮಲೋಕ ಸೇರುವುದು ಗ್ಯಾರಂಟಿಯಾಗಿದೆ. ಇನ್ನಾದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಇತ್ತ ಗಮನಹರಿಸಿ ತಕ್ಷಣ ಈ ಹಳಿಯೂರು-ಬೆಳಕೋಡು-ಗವಟೂರು ಸಂಪರ್ಕ ರಸ್ತೆ ದುರಸ್ಥಿ ಮಾಡುವರೇ ಕಾದು ನೋಡಬೇಕಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.