Ripponpete

ಕೆಸರು ಗದ್ದೆಯಂತಾದ ಹಳಿಯೂರು-ಬೆಳಕೋಡು ಸಂಪರ್ಕ ರಸ್ತೆ !

ರಿಪ್ಪನ್‌ಪೇಟೆ ; ಕಳೆದ ಐದಾರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಳಕೋಡು-ಗವಟೂರು ಸಂಪರ್ಕ ರಸ್ತೆ ಸಂಪೂರ್ಣ ಕೆಸರು ಗದ್ದೆಯಂತಾಗಿ ಸಾರ್ವಜನಿಕರು, ಶಾಲಾ-ಕಾಲೇಜ್ ವಿದ್ಯಾರ್ಥಿಗಳು ಓಡಾಡದಂತಾಗಿದ್ದು ಸಾಕಷ್ಟು ಬಾರಿ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಪ್ರಯೋಜವಾಗದ ಕಾರಣ ಗ್ರಾಮಸ್ಥರೇ ದುರಸ್ತಿಯಲ್ಲಿ ತೊಡಗುವಂತಾಗಿದೆ.

WhatsApp Group Join Now
Telegram Group Join Now
Instagram Group Join Now

ನಿತ್ಯ ಸುಮಾರು ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಓಡಾಡುವ ಮುಖ್ಯ ಸಂಪರ್ಕ ರಸ್ತೆಯಾಗಿದ್ದು ಅನಾರೋಗ್ಯ ಪೀಡಿತರು ಮತ್ತು ಗರ್ಭೀಣಿಯರು ಮತ್ತು ಶಾಲಾ-ಕಾಲೇಜ್ ವಿದ್ಯಾರ್ಥಿಗಳು ರಿಪ್ಪನ್‌ಪೇಟೆಗೆ ಬಂದು ಹೋಗುವ ಪ್ರಮುಖ ರಸ್ತೆ ಇದಾಗಿದ್ದು ಸಂಪೂರ್ಣ ಕೆಸರು ಗದ್ದೆಯಂತಾಗಿ ಯಾವುದೇ ವಾಹನಗಳು ಸಂಚರಿಸದ ಸ್ಥಿತಿ ನಿರ್ಮಾಣವಾಗಿದೆ.

ಗೋಲ್ಡನ್ ಸಿಟಿ ಲೇಔಟ್ ಅವೈಜ್ಞಾನಿಕ ನಿರ್ಮಾಣದಲ್ಲಿ ನಿರ್ಮಿಸಲಾಗಿರುವ ರಸ್ತೆ ಮತ್ತು ಬಾಕ್ಸ್ ಚರಂಡಿ ಮೂಲಕ ನೀರು ಹರಿದು ಈ ರಸ್ತೆಗೆ ನುಗ್ಗುವ ಪರಿಣಾಮದಿಂದಾಗಿ ಈ ರೀತಿ ಹಾಳಾಗಲು ಕಾರಣವೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಇನ್ನೂ ಈ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಬಂದರೆ ಯಮಲೋಕ ಸೇರುವುದು ಗ್ಯಾರಂಟಿಯಾಗಿದೆ‌. ಇನ್ನಾದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಇತ್ತ ಗಮನಹರಿಸಿ ತಕ್ಷಣ ಈ ಹಳಿಯೂರು-ಬೆಳಕೋಡು-ಗವಟೂರು ಸಂಪರ್ಕ ರಸ್ತೆ ದುರಸ್ಥಿ ಮಾಡುವರೇ ಕಾದು ನೋಡಬೇಕಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!