ರಿಪ್ಪನ್‌ಪೇಟೆ ; ಹುಂಚ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಠದಜಡ್ಡುವಿನಲ್ಲಿ ವಾಸದ ಮನೆಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಭಸ್ಮಗೊಂಡ ಘಟನೆ ಭಾನುವಾರ ನಡೆದಿದೆ.
ಹುಂಚ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಠದಜಡ್ಡು ಗ್ರಾಮದ ಸುಮಿತ್ರಾ ಎಂಬುವರ ಮನೆಯಲ್ಲಿ ಭಾನುವಾರ ಏಕಾಏಕಿ ಕಾಣಿಸಿಕೊಂಡ ಬೆಂಕಿ ಕೆಲವೇ ಕ್ಷಣಗಳಲ್ಲಿ ಭಾರಿ ಅಗ್ನಿಯಾಗಿ ವ್ಯಾಪಿಸಿ ಮನೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ.
ಈ ಘಟನೆಯ ಸಮಯದಲ್ಲಿ ಮನೆಯಲ್ಲಿದ್ದವರು ತಕ್ಷಣ ಹೊರಗೆ ಕೂಗಿಕೊಳ್ಳುತ್ತಾ ಓಡಿ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೂ ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ದಾಖಲೆಗಳು ಸುಟ್ಟು ಭಸ್ಮವಾಗಿವೆ ಎಂದು ಹೇಳಲಾಗಿದೆ.
ಲೇಖನವನ್ನು ಮುಂದುವರಿಸಿ ಓದಿ

ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ತಕ್ಷಣ ಸ್ಪಂದಿಸಿ ನೀರು ಮತ್ತು ಇತರ ಸೌಲಭ್ಯಗಳೊಂದಿಗೆ ಬೆಂಕಿ ನಂದಿಸಲು ಹರಸಾಹಸಪಟ್ಟರು. ಆದರೆ ಆಗ್ನಿಶಾಮಕ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಆಗಮಿಸದಿರುವುದಕ್ಕೆ ಗ್ರಾಮಸ್ಥರು ತೀವ್ರ ಅಸಮದಾನ ವ್ಯಕ್ತಪಡಿಸಿದ್ದಾರೆ.
ಬಳಿಕೆ ರಿಪ್ಪನ್‌ಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಸ್ಥಿತಿಯನ್ನು ಅವಲೋಕಿಸಿದರು.

