ಕೊಲೆ ಮಾಡಿದ ದುಷ್ಕರ್ಮಿಗಳನ್ನು ಗುಂಡಿಟ್ಟು ಕೊಲ್ಲಬೇಕು ; ಮಾಜಿ ಸಚಿವ ಹರತಾಳು ಹಾಲಪ್ಪ

Written by malnadtimes.com

Published on:

ಶಿವಮೊಗ್ಗ : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಮಾಡಿದ ದುಷ್ಕರ್ಮಿಗಳನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಆಗ್ರಹಿಸಿದರು.

WhatsApp Group Join Now
Telegram Group Join Now
Instagram Group Join Now

ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/1LJY4yf1yV/


ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸುಹಾಸ್ ಶೆಟ್ಟಿ ಹತ್ಯೆ ಖಂಡನೀಯ. ನಾವು ತಿನ್ನುವ ಪ್ರಾಣಿಯನ್ನು ಕೊಲ್ಲವಾಗ ನೂರಾರು ಬಾರಿ ಯೋಚಿಸುತ್ತೇವೆ. ಆದರೆ ದುಷ್ಕರ್ಮಿಗಳು ರಾತ್ರೋರಾತ್ರಿ ಕಾರನ್ನು ಅಡ್ಡಗಟ್ಟಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಈಗಾಗಲೇ ನಮ್ಮ ರಾಷ್ಟ್ರಾಧ್ಯಕ್ಷರಾದ ವಿಜಯೇಂದ್ರ ಈ ವಿಚಾರವಾಗಿ ಮಂಗಳೂರಿಗೆ ತಲುಪಿದ್ದಾರೆ. ಅಲ್ಲಿನ ಎಸ್‌.ಪಿ.ಯವರು ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುತ್ತೇವೆ ಎಂದು ಹೇಳಿದ್ದಾರೆ. ಆದರೆ ಅವರನ್ನು ಬಂಧಿಸುವುದಲ್ಲ, ಕಂಡಲ್ಲಿ ಗುಂಡಿಟ್ಟು ಕೊಲ್ಲಬೇಕು ಎಂದು ಹೇಳಿದರು.

Leave a Comment