Hosanagara

ಗ್ರಾಮೀಣ ಭಾಗದ ಶಾಲೆಗಳ ಸಮಗ್ರ ಅಭಿವೃದ್ಧಿಯಲ್ಲಿ ಸಂಘ-ಸಂಸ್ಥೆಗಳ ಪಾತ್ರ ನಿರ್ಣಾಯಕ ; ಡಾ. ಬಿ.ಆರ್. ಅಂಬೇಡ್ಕರ್ ಆದಿಜಾಂಬವ ಸಮಿತಿ ರಾಜ್ಯಾಧ್ಯಕ್ಷ ಎನ್. ಪ್ರಕಾಶ್

ಹೊಸನಗರ ; ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಸಂಘ-ಸಂಸ್ಥೆಗಳ ಪಾತ್ರ ಅತ್ಯಂತ ನಿರ್ಣಾಯಕವಾಗಿದೆ. ಅಲ್ಲದೆ, ಹಳೇ ವಿದ್ಯಾರ್ಥಿಗಳು, ದಾನಿಗಳು, ಮೇಲ್ವಿಚಾರಣಾ ಸಮಿತಿಗಳ ಮೂಲಕ ಮೂಲ ಸೌಕರ್ಯ ಕಲ್ಪಿಸುವುದು, ಗುಣಮಟ್ಟದ ಶಿಕ್ಷಣಕ್ಕೆ ಬೆಂಬಲ ನೀಡುವುದು ಹಾಗು ಶಾಲಾ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಳಕ್ಕೆ ಸಕ್ರಿಯವಾಗಿ ತೊಡಗಿಸಿಕೊಂಡು ಮಾದರಿ ಶಾಲೆಯನ್ನಾಗಿ ರೂಪಿಸುವುದು ಎಲ್ಲರ ಆದ್ಯ ಕರ್ತವ್ಯವೂ ಆಗಿದೆ ಎಂದು ಡಾ. ಆದಿಜಾಂಬವ ರಾಜ್ಯ ಸಮಿತಿಯ ರಾಜ್ಯಾಧ್ಯಕ್ಷ ಎನ್. ಪ್ರಕಾಶ್ ತಿಳಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ರಾಮಚಂದ್ರಾಪುರ ಮಠದಲ್ಲಿ ಶ್ರೀ ರಾಮ ಜನ್ಮದಿನದ ಅಂಗವಾಗಿ ಆಯೋಜಿಸಿರುವ ರಾಮೋತ್ಸವ ಕಾರ್ಯಕ್ರಮದಲ್ಲಿ ಪೀಠಾಧ್ಯಕ್ಷ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ತಾಲ್ಲೂಕಿನ ಮಂಡ್ರಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಗೆ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಶಿವಮೊಗ್ಗ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾಂತೀಯ ಮುಖ್ಯಸ್ಥ ವಿಶು ಕುಮಾರ್ ಹಾಗು ಡಾ.ಅಂಬೇಡ್ಕರ್ ಆದಿಜಾಂಬವ ರಾಜ್ಯ ಸಮಿತಿ ಇವರ ಸಹಯೋಗದಲ್ಲಿ ಉಚಿತವಾಗಿ ನೀಡಿದ ಕಂಪ್ಯೂಟರ್ ಹಸ್ತಾಂತರ ಕಾರ್ಯಕ್ರಮದ ಬಳಿಕ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ದಾನಿಗಳು ಮುಂದಾಗಬೇಕು. ಆಧುನಿಕ ತಂತ್ರಜ್ಞಾನಗಳ ಸೌಕರ್ಯ ಮತ್ತೆ ಬಳಕೆ ವಿದ್ಯಾರ್ಥಿಗಳ ಕೈಗೆಟುಕಿದಾಗ ಮಾತ್ರ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಸಾಧ್ಯವಿದೆ. ಈ ನಿಟ್ಟಿನಲ್ಲಿ ಆದಿಜಾಂಬವ ಸಮಿತಿ ರಾಜ್ಯ ವ್ಯಾಪ್ತಿ ಕಾರ್ಯೋನ್ಮೂಕವಾಗಿದೆ ಎಂದರು.

ಈ ಸಂದರ್ಭದಲ್ಲಿ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷ ಎಂ.ಎಸ್.ಪುಟ್ಟಪ್ಪ, ಸದಸ್ಯ ತೊಗರೆ ದೇವೇಂದ್ರ, ಮುಖೋಪಾಧ್ಯಾಯ ಮಹಾಂತೇಶ್, ಶಿಕ್ಷಕಿ ಆಸ್ಮಾ, ಲೋಲಾಕ್ಷಿ, ರೇಖಾ ಕುಮಾರಿ, ರಾಜ್ಯ ಆದಿ ಜಾಂಬವ ಸಂಘದ ಗೌರವಾಧ್ಯಕ್ಷ ದೇವೇಂದ್ರಪ್ಪ, ಕಾರ್ಯದರ್ಶಿ ಚನ್ನೇ ಶ್, ಜಿಲ್ಲಾಧ್ಯಕ್ಷ ಕರಿಬಸಪ್ಪ, ತಾಲೂಕು ಅಧ್ಯಕ್ಷ ದೇವೇಂದ್ರ, ನಗರ ಅಧ್ಯಕ್ಷ ಪ್ರವೀಣ್ ಸೇರಿದ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>