ಹೊಸನಗರ ; ಬಲಿಗಾಗಿ ಕಾದು ಕುಳಿತಿರುವ ಹೊಂಡ-ಗುಂಡಿಗಳು, ರಾಜ್ಯ ಹೆದ್ದಾರಿಯಲ್ಲಿ ಇದೆಂಥಾ ದುಸ್ಥಿತಿ !

Written by Mahesha Hindlemane

Published on:

ಹೊಸನಗರ ; ಪಟ್ಟಣದಿಂದ ಸುಮಾರು 3 ಕಿ.ಮೀ‌. ದೂರದಲ್ಲಿರುವ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಿನಗೊಳ್ಳಿಯ ಹೃದಯ ಭಾಗದಲ್ಲಿರುವ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಭಾರಿ ಪ್ರಮಾಣದ ಗುಂಡಿಗಳು ಬಿದ್ದಿದ್ದು ವಾಹನ ಸಾವರರಿಗೆ ಕಿರಿ-ಕಿರಿ ಮತ್ತು ಅಪಾಯದ ಸ್ಥಿತಿಯಲ್ಲಿದೆ. ಆದರೂ ಸರಿ ಮಾಡುವ ಕೆಲಸಕ್ಕೆ ಕೈ ಹಾಕದಿರುವುದು ವಿಪರ್ಯಸವೇ ಸರಿ.

WhatsApp Group Join Now
Telegram Group Join Now
Instagram Group Join Now

ಹೌದು, ಎಂ ಗುಡ್ಡೆಕೊಪ್ಪ ಗ್ರಾಮದ ಮೂಲಕ ಹಾದು ಹೋಗುವ ರಾಜ್ಯ ಹೆದ್ದಾರಿ 26 ರಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ರಸ್ತೆಯ ತುಂಬೆಲ್ಲಾ ಹತ್ತಾರು ಗುಂಡಿಗಳಾಗಿ ನೀರು ತುಂಬಿ ಸಂಚಾರಕ್ಕೆ ಕಷ್ಟಕರವಾಗಿದೆ. ಶಾಲಾ ಮಕ್ಕಳು, ಅನಾರೋಗ್ಯ ಪೀಡಿತರಿಗೆ ರಸ್ತೆಯಲ್ಲಿ ಸಂಚಾರಿಸಲು ಕಷ್ಟಕರವಾಗಿದೆ.

ಕಳೆದ ವರ್ಷವೂ ಮಳೆಗಾಲದಲ್ಲಿ ಈ ಸ್ಥಳದಲ್ಲಿ ಇದೇ ರೀತಿ ನಿರ್ಮಾಣವಾಗಿತ್ತು. ಲೋಕೋಪಯೋಗಿ ಇಲಾಖೆಯು ಮಣ್ಣಿನಿಂದ ಗುಂಡಿಗಳನ್ನು ಮುಚ್ಚುವ ಮೂಲಕ ತಾತ್ಕಾಲಿಕ ಪರಿಹಾರ ನೀಡಿತ್ತು. ಈ ಬಾರಿ ಮಳೆಗಾದಲ್ಲಿ ಈ ರಸ್ತೆಯಲ್ಲಿ ಹತ್ತಾರು ಗುಂಡಿಗಳು ಬಲಿಗಾಗಿ ಕಾಯುತ್ತಿದೆ‌‌.

ವಾಹನ ಸಂಚಾರವೂ ದುಸ್ಥರವಾಗಿದೆ ಶಾಸಕರು ಮಳೆಗಾಲದ ನಂತರ ರಸ್ತೆ ಡಾಂಬರೀಕರಣ ಮಾಡಿಸುವ ಭರವಸೆ ನೀಡಿದ್ದರು. ಮಳೆಗಾಲ ಮುಗಿಯುವವರೆಗೆ ತಾತ್ಕಾಲಿಕ ಪರಿಹಾರ ಕಂಡುಕೊಳ್ಳಬೇಕಾಗಿದ್ದು ವಾಹನ ಚಾಲುಕರ ಹಿತದೃಷ್ಠಿಯಿಂದ ಕೂಡಲೇ ರಸ್ತೆ ದುರಸ್ಥಿ ಕಾರ್ಯ ನಡೆಸಿ ಇಲ್ಲವಾದರೇ ಹೊಂಡಗಳು ಅಪಾಯಕಾರಿಯಾಗಿದ್ದು, ದ್ವಿಚಕ್ರ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕಾದ ಅನಿವಾರ್ಯತೆ ಇದೆ. ಲಘು ಮತ್ತು ಭಾರಿ ವಾಹನಗಳು ಹೊಂಡಗಳನ್ನು ತಪ್ಪಿಸುವ ಭರದಲ್ಲಿ ಅಪಘಾತವಾಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ.

Leave a Comment