ರಿಪ್ಪನ್‌ಪೇಟೆ ; ಹಿಂದೆ ಹೆಬ್ಬೆಟ್ಟು ಒತ್ತುವವರ ಸಂಖ್ಯೆ ಹೆಚ್ಚು ಇದ್ದಂತಹ ಕಾಲವಿತ್ತು. ಕಾಲ ಬದಲಾದಂತೆ ಈಗ ಶೇ. 86 ಕ್ಕೂ ಹೆಚ್ಚು ಜನ ವಿದ್ಯಾವಂತರಾಗುವಂತಾಗಿ ಕ್ವಾಲಿಟಿ ಶಿಕ್ಷಣಕ್ಕಿಂತ ಗುಣಮಟ್ಟದ ಶಿಕ್ಷಣದತ್ತ ಹೆಚ್ಚು ಪೋಷಕರು ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳುವ ಕಾಲ ಬಂದಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಅಮೃತ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ನಡೆದ ಅಮೃತ ಪಬ್ಲಿಕ್ ಸ್ಕೂಲ್ ನೂತನ ಕಟ್ಟಡ ಉದ್ಘಾಟನೆ ಮತ್ತು 2025-26ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಬಗ್ಗೆ ಪಾಲಕರಿಗೆ ಇರುವಷ್ಟು ಹೆಚ್ಚಿನ ಕಾಳಜಿ ಶಾಲಾ ಶಿಕ್ಷಕರಿಗೂ ಇರಲಿದೆ. ಮಕ್ಕಳಿಗೆ ಓದಿನೊಂದಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗೆ ಶಿಕ್ಷಕರು ಮತ್ತು ಪೋಷಕರು ಹೆಚ್ಚಿನ ಆಸಕ್ತಿ ಮೂಡಿಸಬೇಕು ಎಂದರು.

ಮುಖ್ಯ ಅತಿಥಿಗಳಾಗಿ ವಿಧಾನಪರಿಷತ್ ಸದಸ್ಯೆ ಬಿಲ್ಕೀಶ್‌ಬಾನು, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಜಿಲ್ಲಾ ಪಂಚಾಯಿತ್ ಮಾಜಿ ಸದಸ್ಯ ಬಂಡಿ ರಾಮಚಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಗಣೇಶ, ಅಮೃತ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸಚಿನ್‌ಗೌಡ, ಗ್ರಾಮ ಪಂಚಾಯ್ತಿ ಜನಪ್ರತಿನಿಧಿಗಳು ಹಾಗೂ ಎಸ್.ಡಿ.ಎಂ.ಸಿ. ಹಾಗೂ ಸಿಡಿಸಿ ಪಾಲ್ಗೊಂಡಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





