SHIVAMOGGA ; ಪೌತಿ ಖಾತೆ ಮಾಡಿಕೊಡಲು 25 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಲೆಕ್ಕಿಗನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗದ ಕಸಬಾ-1 ಗ್ರಾಮ ಆಡಳಿತ ಅಧಿಕಾರಿ ಸಂಜಯ್ ಮೋಹಿತೆ ಎಸ್.ಆರ್ ಬಂಧಿತ ಗ್ರಾಮ ಲೆಕ್ಕಿಗ. ಶಿವಮೊಗ್ಗ ತಾಲೂಕು ಆಗಸವಳ್ಳಿ ಹೂಸೂರು ಗ್ರಾಮದ ಮುನಿರಂಗೇಗೌಡ ಅಲಿಯಾಸ್ ಕಿರಣ್ ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದರು.
ಮುನಿರಂಗೇಗೌಡ ಅವರು ತಮ್ಮ ಅಜ್ಜನ ಹೆಸರಿನಲ್ಲಿರುವ ಜಮೀನನ್ನು ಅಜ್ಜಿಯ ಹೆಸರಿಗೆ ಪೌತಿ ಖಾತೆ ಮಾಡಲು ಶಿವಮೊಗ್ಗ ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಿದ್ದರು.
ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಹೋಗಿ ಅರ್ಜಿಯ ಬಗ್ಗೆ ವಿಚಾರಿಸಿದಾಗ ಪೌತಿ ಖಾತೆ ಬದಲಾವಣೆ ಮಾಡಬೇಕಾದರೆ 25 ಸಾವಿರ ರೂಪಾಯಿ ನೀಡಬೇಕೆಂದು ಸಂಜಯ್ ಮೋಹಿತೆ ಬೇಡಿಕೆ ಇಟ್ಟಿದ್ದರು. ಬುಧವಾರ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಸಂಜಯ್ ಮೋಹಿತೆ ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಲಂಚ ಕೇಳಿದ ಮೊಬೈಲ್ ಆಡಿಯೋವನ್ನೂ ಲೋಕಾಯುಕ್ತ ಪೊಲೀಸರಿಗೆ ದೂರುದಾರರು ನೀಡಿದ್ದರು. ಲೋಕಾಯುಕ್ತ ಎಸ್ಪಿ ಮಂಜುನಾಥ ಚೌದರಿ ಎಂ.ಹೆಚ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.