Crime News

Shivamogga | ₹ 25 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ !

SHIVAMOGGA ; ಪೌತಿ ಖಾತೆ ಮಾಡಿಕೊಡಲು 25 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಲೆಕ್ಕಿಗನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿವಮೊಗ್ಗದ ಕಸಬಾ-1 ಗ್ರಾಮ ಆಡಳಿತ ಅಧಿಕಾರಿ ಸಂಜಯ್‌ ಮೋಹಿತೆ ಎಸ್.ಆರ್ ಬಂಧಿತ ಗ್ರಾಮ ಲೆಕ್ಕಿಗ. ಶಿವಮೊಗ್ಗ ತಾಲೂಕು ಆಗಸವಳ್ಳಿ ಹೂಸೂರು ಗ್ರಾಮದ ಮುನಿರಂಗೇಗೌಡ ಅಲಿಯಾಸ್ ಕಿರಣ್ ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದರು.

ಮುನಿರಂಗೇಗೌಡ ಅವರು ತಮ್ಮ ಅಜ್ಜನ ಹೆಸರಿನಲ್ಲಿ‌ರುವ ಜಮೀನನ್ನು ಅಜ್ಜಿಯ ಹೆಸರಿಗೆ ಪೌತಿ ಖಾತೆ ಮಾಡಲು ಶಿವಮೊಗ್ಗ ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಿದ್ದರು.

ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಹೋಗಿ ಅರ್ಜಿಯ ಬಗ್ಗೆ ವಿಚಾರಿಸಿದಾಗ ಪೌತಿ ಖಾತೆ ಬದಲಾವಣೆ ಮಾಡಬೇಕಾದರೆ 25 ಸಾವಿರ ರೂಪಾಯಿ ನೀಡಬೇಕೆಂದು ಸಂಜಯ್ ಮೋಹಿತೆ ಬೇಡಿಕೆ‌ ಇಟ್ಟಿದ್ದರು. ಬುಧವಾರ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಸಂಜಯ್ ಮೋಹಿತೆ ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಲಂಚ ಕೇಳಿದ ಮೊಬೈಲ್ ಆಡಿಯೋವನ್ನೂ ಲೋಕಾಯುಕ್ತ ಪೊಲೀಸರಿಗೆ ದೂರುದಾರರು ನೀಡಿದ್ದರು. ಲೋಕಾಯುಕ್ತ ಎಸ್ಪಿ ಮಂಜುನಾಥ ಚೌದರಿ ಎಂ.ಹೆಚ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>