ಶಿವಮೊಗ್ಗ ಸುದ್ದಿ

ಹುಲಿಸರ ಶ್ರೀವನ ದುರ್ಗಾಪರಮೇಶ್ವರಿ ದೇವಸ್ಥಾನದ ಬೀಗ ಮುರಿದು ಕಳ್ಳತನ !

ಹುಲಿಸರ ಶ್ರೀವನ ದುರ್ಗಾಪರಮೇಶ್ವರಿ ದೇವಸ್ಥಾನದ ಬೀಗ ಮುರಿದು ಕಳ್ಳತನ ! – InShot 20260722 194927894

ತೀರ್ಥಹಳ್ಳಿ : ಅರಳಸುರಳಿ ಸಮೀಪದ ಹುಲಿಸರದಲ್ಲಿ ಇರುವ ಶ್ರೀವನ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯ ಬೀಗ ಒಡೆದು ಬಾಗಿಲು ತೆರೆಯುವ ಮೂಲಕ ದೇವಿಯ ಬೆಳ್ಳಿಯ ಮುಖವಾಡ, ಮಾಂಗಲ್ಯ ಸರ, ಮತ್ತು ಇನ್ನಿತರ ಬೆಳ್ಳಿ ಪೂಜಾ ವಸ್ತುಗಳೊಂದಿಗೆ ಸುಮಾರು 2 ಕಿಲೋಗ್ರಾಂ ಬೆಳ್ಳಿಯ ವಸ್ತುಗಳು, ಕಾಣಿಕೆಯನ್ನು ಕಳ್ಳರು ದೋಚಿರುವ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಅರಳಸುರುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈ ದೇವಸ್ಥಾನದಲ್ಲಿ ವಾರದಲ್ಲಿ ಮಂಗಳವಾರ ಮತ್ತು ಶುಕ್ರವಾರ ಎರಡು ದಿನ ಪೂಜೆ ನಡೆಯುತ್ತಿದ್ದು, ಇದನ್ನು ಗಮನಿಸಿ ಈ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ.

ಭಕ್ತರೊಬ್ಬರು ಇಂದು ಬೆಳಿಗ್ಗೆ ದೇವರ ದರ್ಶನಕ್ಕೆ ಬಂದಾಗ ಕಳ್ಳತನ ನಡೆರುವ ಬಗ್ಗೆ ಕಂಡು ಬಂದಿದ್ದು ತಕ್ಷಣವೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ತೀರ್ಥಹಳ್ಳಿ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಇಮ್ರಾನ್ ಬೇಗ್, ಸಬ್ ಇನ್ಸ್‌ಪೆಕ್ಟರ್ ಸುಷ್ಮಾ ಮತ್ತು ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಪ್ರಾರಂಭವಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]