SAGARA ; ಹೊಸ ವರ್ಷಕ್ಕೆ ಜೋಗ ಜಲಪಾತ ವೀಕ್ಷಣೆಗೆ ಶಿವಮೊಗ್ಗ ಜಿಲ್ಲಾಡಳಿತ ಅವಕಾಶ ಮಾಡಿಕೊಟ್ಟಿದೆ. ಮುಖ್ಯದ್ವಾರ ಕಾಮಗಾರಿ ನಿಮಿತ್ತ ಹೇರಿದ್ದ ನಿರ್ಬಂಧವನ್ನ ತಾತ್ಕಾಲಿಕವಾಗಿ ಸಡಿಲಿಸಲಾಗಿದೆ.
ಜೋಗ ನಿರ್ವಹಣಾ ಪ್ರಾಧಿಕಾರದ ಪ್ರವೇಶ ದ್ವಾರ ಬಿಟ್ಟು ಉಳಿದ ಸ್ಥಳಗಳಿಂದ ಜೋಗ ಜಲಪಾತ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ.
ಮುಖ್ಯ ರಸ್ತೆಯ ವೀವ್ ಪಾಯಿಂಟ್, ಯಾತ್ರಿ ನಿವಾಸ, ರಾಣಿ ಫಾಲ್ಸ್, ಮುಂಬಯಿ ಬಂಗಲೆ, ಮುಂಗಾರು ಮಳೆ ಪಾಯಿಂಟ್ ಸೇರಿದಂತೆ ಇತರೆ ಸ್ಥಳಗಳಿಂದ ಪ್ರವಾಸಿಗರು ಜಲಪಾತದ ಸೊಬಗು ಕಣ್ತುಂಬಿಕೊಳ್ಳಬಹುದು ಎಂದು ಭಾನುವಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜೋಗ ಜಲಪಾತದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಜಲಪಾತ ವೀಕ್ಷಿಸಲು ತೆರಳುವ ಮುಖ್ಯ ಪ್ರವೇಶ ದ್ವಾರದ ಗೋಪುರ ನಿರ್ಮಾಣ ಕಾಮಗಾರಿಯೂ ಪ್ರಗತಿಯಲ್ಲಿದೆ. ಆದ್ದರಿಂದ ಜ.1ರಿಂದ ಮಾರ್ಚ್ 15ರವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಈಚೆಗೆ ಆದೇಶ ಹೊರಡಿಸಿದ್ದರು.
ಮುಖ್ಯ ಪ್ರವೇಶ ದ್ವಾರ ಬಿಟ್ಟು ಉಳಿದ ಸ್ಥಳಗಳಲ್ಲಿ ತಡೆಬೇಲಿಗಳನ್ನು ನಿರ್ಮಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತಾ ಸಿಬ್ಬಂದಿಯನ್ನೂ ನೇಮಿಸಿ ಜಲಪಾತ ವೀಕ್ಷಣೆಗೆ ಅನುವು ಮಾಡಿಕೊಡಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಜಂಟಿ ಕಾರ್ಯದರ್ಶಿ ಧರ್ಮಪ್ಪ ತಿಳಿಸಿದ್ದಾರೆ.

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.