Ripponpete

ಅಭಿವೃದ್ದಿಗೆ ಕೊರತೆಯಿಲ್ಲ-ಜನರ ಪ್ರೀತಿ ವಿಶ್ವಾಸಕ್ಕೆ ಬರವಿಲ್ಲ ; ಶಾಸಕ ಗೋಪಾಲಕೃಷ್ಣ ಬೇಳೂರು

ರಿಪ್ಪನ್‌ಪೇಟೆ ; ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪಾಜಿಯವರು ಅಭಿವೃದ್ದಿಯೇ ಮೂಲ ಮಂತ್ರವಲ್ಲ. ಬಡ ಜನರ ಕಣ್ಣೀರು ಒರೆಸುವುದರೊಂದಿಗೆ ಪ್ರೀತಿ – ವಿಶ್ವಾಸಗಳಿಸುವುದು ಮುಖ್ಯ. ಅವರ ಆದರ್ಶಗಳಲ್ಲಿ ಬೆಳೆದು ಬಂದ ನಾನು ಕೂಡಾ ಜನರ ಪ್ರೀತಿ ವಿಶ್ವಾಸಗಳಿಸುವುದರೊಂದಿಗೆ ಅಭಿವೃದ್ದಿಗೆ ಕೊರತೆಯಾಗದಂತೆ ನಡೆದುಕೊಂಡು ಬರುತ್ತಿರುವುದಾಗಿ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.

WhatsApp Group Join Now
Telegram Group Join Now
Instagram Group Join Now

ಸಣ್ಣ ನೀರಾವರಿ ಇಲಾಖೆಯ ಯೋಜನೆಯಡಿ ಕ್ಷೇತ್ರದ ಚಿಕ್ಕಜೇನಿ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮುತ್ತಲ ಗ್ರಾಮದ ಬಳಿ ಬ್ಯಾರೇಜ್ ಹತ್ತಿರ 35 ಲಕ್ಷ ರೂ. ಅಂದಾಜು ವೆಚ್ಚದ ಪ್ರವಾಹ ಸಂರಕ್ಷಣಾ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಗವಟೂರು ತಾವರೆಕರೆಯ 40 ಲಕ್ಷ ರೂ. ಅಂದಾಜು ವೆಚ್ಚದ ಕೆರೆ ಹೂಳೆತ್ತುವ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕೆರೆಗಳನ್ನು ಅಭಿವೃದ್ದಿ ಮಾಡುವುದರಿಂದ ಕೆರೆಯಲ್ಲಿ ಅಂತರ್ಜಲ ಹೆಚ್ಚಾಗುವುದು. ಸುತ್ತಮುತ್ತಲಿನ ಬಾವಿ ಬೋರ್‌ವೆಲ್‌ಗಳಲ್ಲಿ ಬೇಸಿಗೆಯಲ್ಲಿ ನೀರು ಬತ್ತಿಹೋಗದಂತೆ ಇರುವುದು ಹಾಗೂ ಪ್ರಾಣಿ ಪಕ್ಷಿಗಳಿಗೆ ಜಾನುವಾರುಗಳಿಗೆ ಕುಡಿಯಲು ಸಹ ಬೇಸಿಗೆಯಲ್ಲಿ ನೀರು ದೊರೆಯುವಲು ಸಹಕಾರಿಯಾಗುವುದು. ರಿಪ್ಪನ್‌ಪೇಟೆಯ ಅಭಿವೃದ್ದಿಗಾಗಿ ಹೆಚ್ಚಿನ ಒತ್ತು ನೀಡಲಾಗಿದೆ ಆದೇ ರೀತಿಯಲ್ಲಿ ಮಾರುತಿಪುರಕ್ಕೂ ಅಭಿವೃದ್ದಿಗೆ ಆಧ್ಯತೆ ನೀಡಲಾಗಿ ಮಾರುತಿಪುರ ಬಳಿ ಗ್ರೀಡ್ ನಿರ್ಮಾಣ ಕಾರ್ಯ ಮಾಡಲಾಗುತ್ತಿದ್ದು ಶೀಘ್ರದಲ್ಲಿ ಉದ್ಘಾಟನೆ ಮಾಡಲಾಗುವುದೆಂದರು.

ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿಯನ್ನ ಪಟ್ಟಣ ಪಂಚಾಯಿತ್‌ಯನ್ನಾಗಿ ಮೇಲ್ದರ್ಜೆಗೇರಿಸುವ ಬಹು ವರ್ಷದ ಕನಸು ನನ್ನದಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರದ ಮುಂದೆ ಪ್ರಸ್ತಾವನೆ ಇಡುವುದಾಗಿ ಘೋಷಿಸಿದ ಅವರು, ಈಗಾಗಲೇ ಯಡೆಹಳ್ಳಿಯಿಂದ ರಿಪ್ಪನ್‌ಪೇಟೆಯ ಸುಮಾರು 10 ಕಿ.ಮೀ.ದೂರದ ರಾಜ್ಯ ಹೆದ್ದಾರಿಯ ಸಂಪರ್ಕ ರಸ್ತೆ ಸೇರಿದಂತೆ ವಿನಾಯಕ ವೃತ್ತದಿಂದ ನಾಲ್ಕು ಸಂಪರ್ಕ ರಸ್ತೆಯ ಅಗಲೀಕರಣ ಮತ್ತು ಒಳಚರಂಡಿ ಡಿವೈಡರ್ ಪಾದಚಾರಿಗಳಿಗೆ ಸೈಡ್ ಮೇಟ್ಲಿಂಗ್ ನಿರ್ಮಾಣ ವಿದ್ಯುತ್ ಸಂಪರ್ಕದ ಕಾಮಗಾರಿಗಾಗಿ 27 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿಸಿಕೊಂಡು ಬರಲಾಗಿ ಕಾಮಗಾರಿ ಸಹ ಪ್ರಗತಿಯ ಹಂತದಲ್ಲಿದ್ದು ಜೂನ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಈಗಾಗಲೇ ಗುತ್ತಿಗೆದಾರನಿಗೆ ಸೂಚಿಸಲಾಗಿದ್ದು ಶೀಘ್ರದಲ್ಲಿ ಉದ್ಘಾಟಿಸಲಾಗುವುದೆಂದು ಹೇಳಿದ ಅವರು, ಯಾರೋ ಮಾಡಿದ ಕಾಮಗಾರಿಯನ್ನು ನಾನು ಮಾಡಿಸಿದ್ದು ಎಂದು ಹೇಳಿಕೊಳ್ಳುವ ವ್ಯಕ್ತಿತ್ವದ ವ್ಯಕ್ತಿ ಈ ಬೇಳೂರು ಅಲ್ಲ ಎಂದು ಸಭೆಯಲ್ಲಿ ಹೆಸರು ಪ್ರಸ್ತಾಪ ಮಾಡದೇ ಟೀಕಿಸಿದ ಅವರು ಗ್ಯಾರಂಟಿ ಯೋಜನೆಯ ಜೊತೆಯಲ್ಲಿಯೂ ನನ್ನ ಕ್ಷೇತ್ರದ ಅಭಿವೃದ್ದಿಗೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸಾಹೇಬ್ರ ಹೆಚ್ಚಿನ ಅನುದಾನವನ್ನು ನೀಡಿರುತ್ತಾರೆ. ಅಭಿವೃದ್ದಿ ಕಾರ್ಯಕ್ಕೆ ಕೊರೆತೆಯಿಲ್ಲದೆ ನಾನು ಕ್ಷೇತ್ರದ ಜನರ ಪ್ರೀತಿ ವಿಶ್ವಾಸವನ್ನುಗಳಿಸುವುದರೊಂದಿಗೆ ಜನಪರವಾಗಿ ಕೆಲಸ ಮಾಡುತ್ತಿರುವುದಾಗಿ ತಿಳಿಸಿ, ಯಾವುದೇ ಜಾತಿ ಭೇದ-ಭಾವನೆ ಮಾಡದೇ ಜನಸಾಮಾನ್ಯರಿಗೆ ದೊರೆಯುವಂತೆ ಮಾಡಿದ ತೃಪ್ತಿ ನನಗಿದೆ ಎಂದರು.

ತಾಲ್ಲೂಕ್ ಪಂಚಾಯಿತ್ ಮಾಜಿ ಸದಸ್ಯ ಹಾಗೂ ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ.ಚಂದ್ರಮೌಳಿಗೌಡ, ಗ್ಯಾರಂಟಿ ಸಮಿತಿಯ ಅಧ್ಯಕ್ಷ ಚಿದಂಬರ್, ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತ್ ಮತ್ತು ಚಿಕ್ಕಜೇನಿ ಗ್ರಾಮ ಪಂಚಾಯಿತ್ ಮಾಜಿ ಅಧ್ಯಕ್ಷರು, ಸದಸ್ಯರು, ಕಾಂಗ್ರೆಸ್ ಮುಖಂಡರು ಹಾಜರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!