Shivamogga

ನಾಯಕತ್ವ ಬದಲಾವಣೆಯಾಗಲಿ, ಅಧ್ಯಕ್ಷ ಸ್ಥಾನದ ಬದಲಾವಣೆಯಾಗಲಿ ಇಲ್ಲ ; ಸಚಿವ ಎಂ.ಬಿ. ಪಾಟೀಲ್‌

ಶಿವಮೊಗ್ಗ ; ನಮ್ಮ ಪಕ್ಷದಲ್ಲಿ ನಾಯಕತ್ವ ಬದಲಾವಣೆಯಾಗಲಿ, ಅಧ್ಯಕ್ಷ ಸ್ಥಾನದ ಬದಲಾವಣೆಯಾಗಲಿ ಯಾವುದೂ ಹೈಕಮಾಂಡ್ ಮುಂದೆ ಇಲ್ಲ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಬಗ್ಗೆ ಸತೀಶ್ ಜಾರಕಿಹೊಳಿ ಹಾಗೂ ಡಿ.ಕೆ.ಶಿವಕುಮಾರ್ ಒಟ್ಟಿಗೆ ಕುಳಿತು ಚರ್ಚೆ ನಡೆಸಿದ್ದಾರೆ. ನಮ್ಮ ಪಕ್ಷದಲ್ಲಿ ಹೈಕಮಾಂಡ್ ಇದೆ ಎಲ್ಲವನೂ ಅವರೇ ತಿರ್ಮಾಣ ಮಾಡುತ್ತಾರೆ. ಸದ್ಯಕ್ಕೆ ಯಾವುದೇ ಸ್ಥಾನ ಖಾಲಿಯೂ ಇಲ್ಲ ಈಗ ಏನಿದ್ದರೂ ಬೆಳಗಾವಿಯ ಕಾರ್ಯಕ್ರಮವನ್ನ ಯಶಸ್ವಿಗೊಳಿಸುವತ್ತ ನಾಯಕರು ತಮ್ಮ ಗಮನ ಕೇಂದ್ರೀಕರಿಸಿದ್ದಾರೆ.

ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/1FVuMzsFtT/

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಸುರ್ಜೆವಾಲಾ ನೋಟಿಸ್ ನೀಡಿದ್ದಾರೆ ಎಂಬ ಮಂಜುನಾಥ ಭಂಡಾರಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ನನಗೆ ಏನೂ ಗೊತ್ತಿಲ್ಲ, ಕಾರ್ಯಾಧ್ಯಕ್ಷರಾಗಿ ಅವರು ಹೇಳಿರಬಹುದು, ಬೇರೆ ಪಕ್ಷದ ನಾಯಕರೊಂದಿಗೆ ಊಟ ಮಾಡಿದ್ದಾರೆ ಎಂಬ ಮಾತ್ರಕ್ಕೆ ಬೇರೆ ಅರ್ಥ ಕಲ್ಪಿಸುವುದು ಸರಿಯಲ್ಲ. ಅದರಲ್ಲಿ ಯಾವುದೇ ತಪ್ಪು ಇರುವುದಿಲ್ಲ. ನಮ್ಮ ಮನೆಗೂ ಅಶೋಕ್ ಸೇರಿದಂತೆ ಬಿಜೆಪಿ ಅನೇಕ ಮುಖಂಡರು ಬಂದು ಹೋಗಿದ್ದಾರೆ. ನಾನು ಸಹ ಮಾಜಿ ಸಿಎಂ ಬೊಮ್ಮಾಯಿ ಮನೆಗೆ ಹೋಗಿದ್ದೇನೆ ಹಾಗೆಂದ ಮಾತ್ರಕ್ಕೆ ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಸರಿಯೇ? ಎಂದು ಪ್ರಶ್ನೆ ಮಾಡಿದರು.

ಇನ್ನು ಹಾಗೆ ನೋಡಿದರೆ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ಎಲ್ಲವೂ ಸರಿಯಾಗಿಯೇ ಇದೆ. ಸಿಎಂ ರೇಸ್ ನಲ್ಲಿ ಎಂ.ಬಿ ಪಾಟೀಲ್ ಹೆಸರು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಪಕ್ಷದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ ಹಾಗಾಗಿ ಅದರ ಬಗ್ಗೆ ಚರ್ಚೆ ಇಲ್ಲ ಎಂದರು.

ಶಿವಮೊಗ್ಗ ಏರ್‌ಪೋರ್ಟ್ ನೈಟ್ ಲ್ಯಾಂಡಿಂಗ್ ಫೆಸಿಲಿಟಿ ಕುರಿತಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಮೊನ್ನೆಯಷ್ಟೇ 165 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ. ಎಲ್ಲಾ ರೀತಿಯ ಸೌಲಭ್ಯಗಳನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಒದಗಿಸುತ್ತೇವೆ ಎಂದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>