ಹೊಸನಗರ ; ನಾಳೆ (ಜ.16) ಬೆಳಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಫ್ 11 ಕರಿನಗೊಳ್ಳಿ ಫೀಡರ್ ಗೆ ಹೊಸದಾಗಿ 11 ಕೆ.ವಿ ವಿದ್ಯುತ್ ಮಾರ್ಗ ವಿಸ್ತರಣಾ ನಿರ್ಮಾಣ ಕಾಮಗಾರಿ ಪ್ರಯುಕ್ತ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ !
ಹೊಸನಗರ ಪಟ್ಟಣ ಸೇರಿದಂತೆ ಎಂ.ಗುಡ್ಡೆಕೊಪ್ಪ, ಮುಂಬಾರು ಮತ್ತು ಕೋಡೂರು ಗ್ರಾಮ ಪಂಚಾಯಿತಿಯ ಸುತ್ತಮುತ್ತ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಆದ್ದರಿಂದ ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





