ರಿಪ್ಪನ್‌ಪೇಟೆ : ಇಲ್ಲಿನ ಮೆಸ್ಕಾಂ ಉಪಶಾಖೆಯ 110/11 ಕೆವಿ ಮಾರ್ಗದ ತುರ್ತು ಕಾಮಗಾರಿಯ ನಿಮಿತ್ತ ನಾಳೆ (ಆ.13) ಬೆಳಿಗ್ಗೆ 10-00 ರಿಂದ ಸಂಜೆ 06-00 ಗಂಟೆಯವರೆಗೆ ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾ.ಪಂ ವ್ಯಾಪ್ತಿಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಮೆಸ್ಕಾಂ ಇಲಾಖೆಯ ಅಭಿಯಂತರರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ ?
ರಿಪ್ಪನ್‌ಪೇಟೆ, ಹುಂಚ, ಬೆಳ್ಳೂರು, ಬಾಳೂರು, ಅರಸಾಳು , ಕೋಡೂರು, ಹೆದ್ದಾರಿಪುರ, ಕೆಂಚನಾಲ, ಅಮೃತ (ಗರ್ತಿಕೆರೆ), ಚಿಕ್ಕಜೇನಿ ಗ್ರಾ.ಪಂ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ತಿಳಿಸಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.