Ripponpete

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾ.ಪಂ. ವ್ಯಾಪ್ತಿಗಳಲ್ಲಿ ನಾಳೆ  ಕರೆಂಟ್ ಇರಲ್ಲ !

power
power

RIPPONPETE ; ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ (ಡಿ.12) ಬೆಳಗ್ಗೆ 10:00 ರಿಂದ ಸಂಜೆ 06:00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.

WhatsApp Group Join Now
Telegram Group Join Now
Instagram Group Join Now

ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ 110/11 ಕೆ.ವಿ. ಎಂ.ಯು.ಎಸ್.ಎಸ್. ರಿಪ್ಪನ್‌ಪೇಟೆಯಲ್ಲಿ ತುರ್ತು ನಿರ್ವಹಣೆ ಮತ್ತು ಹೆಚ್ಚುವರಿ ಫೀಡರ್ ನಿರ್ಮಾಣ ಕಾಮಗಾರಿ ಪ್ರಯುಕ್ತ ವಿದ್ಯುತ್ ಗುರುವಾರ ಸರಬರಾಜು ಇರುವುದಿಲ್ಲ.

ರಿಪ್ಪನ್‌ಪೇಟೆ ಶಾಖಾ ವ್ಯಾಪ್ತಿಯ ರಿಪ್ಪನ್‌ಪೇಟೆ, ಹೆದ್ದಾರಿಪುರ, ಕೆಂಚನಾಲ, ಅಮೃತ (ಗರ್ತಿಕೆರೆ), ಹುಂಚ, ಬೆಳ್ಳೂರು, ಬಾಳೂರು, ಅರಸಾಳು, ಮತ್ತು ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ತಿಳಿಸಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]