ಹೊಸನಗರ

ಮೇ 06 ರಂದು ಹೊಸನಗರ ಟೌನ್ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ !

power
power

ಹೊಸನಗರ ; ಇಲ್ಲಿನ ಉಪವಿಭಾಗದಲ್ಲಿ ಮೇ 06 ರಂದು ಬೆಳಿಗ್ಗೆ 10-00 ರಿಂದ ಸಂಜೆ 5-00 ಗಂಟೆವರೆಗೆ ಸಾಗರ 110/33/11 ಕೆ.ವಿ ಉಪವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣಾ ಕಾರ್ಯ ಇರುವುದರಿಂದ ಮತ್ತು ಇದೇ ದಿನ 33 ಕೆ.ವಿ ಸಾಗರ – ಹೊಸನಗರ ಮಾರ್ಗ ನಿರ್ವಹಣೆ ಹಾಗೂ ಉಪವಿದ್ಯುತ್ ವಿತರಣಾ ಕೇಂದ್ರ ನಿರ್ವಹಣೆ ಪ್ರಯುಕ್ತ ಸಾಗರದಿಂದ ಹೊಸನಗರಕ್ಕೆ ಬಂದಿರುವ ಸಾಗರ-ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನಬೆಸಿಗೆ, ಸೊನಲೆ ಗ್ರಾಮ ಪಂಚಾಯಿತಿ ಮತ್ತು ಹೊಸನಗರ ಟೌನ್ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

WhatsApp Group Join Now
Telegram Group Join Now
Instagram Group Join Now

ಆದ್ದರಿಂದ ಹೊಸನಗರ ಉಪವಿಭಾಗದ ಗ್ರಾಹಕರು ಸಹಕರಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪತ್ರಿಕಾ ಪ್ರಕಟಣೆ ಮೂಲಕ ಕೋರಿದ್ದಾರೆ‌.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]