ಹೊಸನಗರ

ಹೊಸನಗರ ತಾಲೂಕಿನ ಹಲವೆಡೆ ಇಂದು ಇಡೀ ದಿನ ಕರೆಂಟ್ ಇರಲ್ಲ

ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹೊಸನಗರ ಉಪವಿಭಾಗದ ಹಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.

MT Power Outage

ಹೊಸನಗರ: ಸಾಗರ-ಹೊಸನಗರ 33 ಕೆ.ವಿ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ, ಇಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹೊಸನಗರ ಉಪವಿಭಾಗದ ಹಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.

WhatsApp Group Join Now
Telegram Group Join Now
Instagram Group Join Now

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ಸಾಗರದಿಂದ ಹೊಸನಗರಕ್ಕೆ ಸಂಪರ್ಕ ಕಲ್ಪಿಸುವ ಈ ಮಾರ್ಗದ ವ್ಯಾಪ್ತಿಗೆ ಒಳಪಡುವ ಹೊಸನಗರ ಪಟ್ಟಣ ಸೇರಿದಂತೆ ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನಬೆಸಿಗೆ, ಸೊನಲೆ, ಎಂ.ಗುಡ್ಡೆಕೊಪ್ಪ ಹಾಗೂ ಕರಿನಗೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳಲ್ಲಿ ಇಡೀ ದಿನ ವಿದ್ಯುತ್ ಇರುವುದಿಲ್ಲ.

ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಹೊಸನಗರ ಮೆಸ್ಕಾಂ (MESCOM) ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

error: Content is protected !!